ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ತಂಡವು ಈ ಬಾರಿಯ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯೂಪಿಎಲ್) ಕ್ರಿಕೆಟ್ ಟೂರ್ನಿಯ ತನ್ನ ಕೊನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್ ಅಂತರದ ಸೋಲು ಕಂಡಿದೆ.
ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ ನೀಡಿದ 126 ರನ್‌ಗಳ ಗುರಿ ಬೆನ್ನತ್ತಿದ ಮುಂಬೈ, ಇನ್ನೂ 21 ಎಸೆತಗಳು ಬಾಕಿ ಇರುವಂತೆಯೇ 129 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಮುಂಬೈಗೆ ಆರಂಭಿಕ ಬ್ಯಾಟರ್’ಗಳಾದ ಹೀಲಿ ಮ್ಯಾಥ್ಯೂಸ್ (24) ಹಾಗೂ ಯಸ್ತಿಕಾ ಭಾಟಿಯಾ (30) ಉತ್ತಮ ಆರಂಭ ಒದಗಿಸಿದರು.
ಈ ಜೋಡಿ ಮೊದಲ ವಿಕೆಟ್ ಅರ್ಧಶತಕದ ಜೊತೆಯಾಟವಾಡಿತು.6ನೇ ಓವರ್‌ನ ಕೊನೇ ಎಸೆತದಲ್ಲಿ ಯಸ್ತಿಕಾ ಔಟಾದರು. ಆಗ ತಂಡದ ಮೊತ್ತ 53 ರನ್. 8ನೇ ಓವರ್‌ನ ಮೊದಲ ಎಸೆತದಲ್ಲಿ ಮ್ಯಾಥ್ಯೂಸ್ ವಿಕೆಟ್ ಒಪ್ಪಿಸಿದರು.
ಬಳಿಕ ಬಂದ ನಥಾಲಿ ಸ್ಕೀವರ್ ಬ್ರಂಟ್ (13) ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ (2) ಅವರೂ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೀಗಾಗಿ 19 ರನ್’ಗಳ ಅಂತರದಲ್ಲಿ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡ ಮುಂಬೈ ತಂಡ ಸಂಕಷ್ಟಕ್ಕೆ ಸಿಲುಕಿತು.
ಈ ವೇಳೆ ಜೊತೆಯಾದ ಅಮೇಲಿಯಾ ಕೆರ್ ಹಾಗೂ ಪೂಜಾ ವಸ್ತ್ರಾಕರ್ ತಮ್ಮ ತಂಡವನ್ನು ಅಪಾಯದಿಂದ ಪಾರು ಮಾಡಿದರು.
5ನೇ ವಿಕೆಟ್ ಪಾಲುದಾರಿಕೆಯಲ್ಲಿ 47 ರನ್ ಗಳಿಸಿದ ಇವರಿಬ್ಬರು ತಮ್ಮ ತಂಡವನ್ನು ಜಯದ ಹೊಸ್ತಿಲಿಗೆ ತಂದು ನಿಲ್ಲಿಸಿದರು. ಗೆಲುವಿಗೆ ಇನ್ನು 6 ರನ್ ಬೇಕಿದ್ದಾಗ ಕನಿಕಾ ಅಹುಜಾ ಎಸೆದ 16ನೇ ಓವರ್‌ನ 5ನೇ ಎಸೆತದಲ್ಲಿ ಪೂಜಾ (19) ಔಟಾದರು. ನಂತರದ ಎಸೆತದಲ್ಲೇ ಇಸ್ಸಿ ವಾಂಗ್ (0) ಸಹ ವಿಕೆಟ್ ಒಪ್ಪಿಸಿದರು.
ಆದರೂ ಕೊನೆವರೆಗೆ ನಿರಾತಂಕವಾಗಿ ಬ್ಯಾಟ್ ಬೀಸಿದ ಅಮೇಲಿಯಾ ಕೆರ್ ಅಜೇಯ 31 ರನ್ ಗಳಿಸಿ, ಅಮನ್’ಜೋತ್ ಕೌರ್ ಜೊತೆಗೂಡಿ ಆರ್’ಸಿಬಿ ಬಾಕಿ ಚುಕ್ತಾ ಮಾಡಿ ಸಂಭ್ರಮಿಸಿದರು.
ಇದರೊಂದಿಗೆ ಆಡಿರುವ 8 ಪಂದ್ಯಗಳಲ್ಲಿ 6ನೇ ಗೆಲುವು ಕಂಡಿರುವ ಮುಂಬೈ, ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.