ಮನೆ ಉದ್ಯೋಗ ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಪ್ರಾದೇಶಿಕ ಶಿಕ್ಷಣ ಸಂಸ್ಥೆ-ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಇದೇ ಮಾರ್ಚ್ 24ರಂದು ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಶೈಕ್ಷಣಿಕ ಅರ್ಹತೆ:

ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂ.ಎಸ್ಸಿ, ಎಂ.ಫಿಲ್, ಪಿಎಚ್.ಡಿ ಪೂರ್ಣಗೊಳಿಸಿರಬೇಕು.

ವೇತನ:

ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 45,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:

ಪ್ರಾದೇಶಿಕ ಶಿಕ್ಷಣ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:

ಪ್ರಾಂಶುಪಾಲರ ಕೊಠಡಿ

ಪ್ರಾದೇಶಿಕ ಶಿಕ್ಷಣ ಸಂಸ್ಥೆ

ಮೈಸೂರು – 570006

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 16/03/2023

ಸಂದರ್ಶನ ನಡೆಯುವ ದಿನಾಂಕ: ಮಾರ್ಚ್ 24, 2023 ಬೆಳಗ್ಗೆ 11 ಗಂಟೆಗೆ