ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 236 ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ ಸೈಟ್ bmrc.co.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಹುದ್ದೆಯ ಮಾಹಿತಿ:
ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್- 108
ಸೆಕ್ಷನ್ ಎಂಜಿನಿಯರ್- 14
ಮೇಂಟೈನರ್- 114
ವೇತನ:
ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್- ಮಾಸಿಕ ₹ 35,000- 82,660
ಸೆಕ್ಷನ್ ಎಂಜಿನಿಯರ್- ಮಾಸಿಕ ₹ 40,000- 94,500
ಮೇಂಟೈನರ್- ಮಾಸಿಕ ₹ 25,000-59,060
ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಐಟಿಐ, ಡಿಪ್ಲೊಮಾ, ಬಿಇ/ ಬಿ.ಟೆಕ್, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್ 22, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 1180 + 18% GST
SC/ ST ಅಭ್ಯರ್ಥಿಗಳು- 590 + 18% GST
ಉದ್ಯೋಗದ ಸ್ಥಳ:
ಬೆಂಗಳೂರು
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಮೆರಿಟ್ ಲಿಸ್ಟ್
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 24, 2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಏಪ್ರಿಲ್ 27, 2023
ಲಿಖಿತ ಪರೀಕ್ಷೆ ನಡೆಯುವ ದಿನ: ಜೂನ್ 6th, 7th & 8th 2023
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.