ಬೆಂಗಳೂರು: ಶಿಕಾರಿಪುರ ಕ್ಷೇತ್ರದಲ್ಲಿ ನಾನು ಓಡಾಡುತ್ತಿದ್ದೇನೆ. ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ಹೇಳುತ್ತಾರೆ. ಅದನ್ನು ಕೇಂದ್ರದ ನಾಯಕತ್ವ ತೀರ್ಮಾನಿಸಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಶಿಕಾರಿಪುರದಲ್ಲಿ ಒಂದು ಸುತ್ತು ಪ್ರವಾಸ ಮಾಡಿದ್ದೇನೆ. ಮತ್ತೊಂದು ಸುತ್ತು ಪ್ರವಾಸ ಮಾಡುವೆ ಎಂದು ಹೇಳಿದರು.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ. ಅಮಿತ್ ಶಾ ಅವರು ಪ್ರೀತಿಯಿಂದ ಮಾತನಾಡಿಸಿದ್ರು. ಅಮಿತ್ ಶಾ ನಡೆಯಿಂದ ಆನೆ ಬಲ ಬಂದಂತಾಗಿದೆ. ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇನೆ ಎಂದರು.
ಬಿಎಸ್ ವೈ ಹಿಂದಿನಿಂದಲೂ ಉತ್ಸಾಹದಲ್ಲಿದ್ದಾರೆ . ಬಿಎಸ್ ವೈ ಯಾರ ಜೊತೆ ಮಾತನಾಡಬೇಕೋ ಅವರ ಜೊತೆ ಮಾತನಾಡಿದ್ದಾರೆ. ಬಿಎಸ್ ವೈ ಮತ್ತು ಅಮಿತ್ ಶಾ ಅವರು ನಡುವೆ ರಾಜಕೀಯ ವಿಚಾರ ಚರ್ಚೆಯಾಗಿದೆ. ಈ ಬಾರಿ ಅತಂತ್ರ ಸರ್ಕಾರ ಬರಲು ಬಿಡಲ್ಲ. ಬಿಜೆಪಿ ಸರ್ಕಾರ ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.