ಚಿತ್ರದುರ್ಗ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಆಹ್ವಾನ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಇಲ್ಲಿನ ಹೆಲಿಪ್ಯಾಡ್’ನಲ್ಲಿ ಶುಕ್ರವಾರ ಪ್ರತಿಕ್ರಿಯೆ ನೀಡಿದರು.
ವರುಣಾದಿಂದ ಟಿಕೆಟ್ ನೀಡುವಂತೆ ಹೈಕಮಾಂಡ್’ಗೆ ಹೇಳಿದ್ದೇನೆ ಎಂದು ತಿಳಿಸಿದರು.
ಚುನಾವಣೆಗೆ ಸ್ಪರ್ಧಿಸುವಂತೆ ರಾಜ್ಯದ 25 ಕ್ಷೇತ್ರಗಳಿಂದ ಆಹ್ವಾನ ಬಂದಿದೆ. ಆ ಎಲ್ಲ ಕಡೆಯೂ ಸ್ಪರ್ಧಿಸಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವುದು ಸೂಕ್ತ ಎಂಬುದಾಗಿ ಕುಟುಂಬ ಅಭಿಪ್ರಾಯಪಟ್ಟಿದೆ.
ಮತ್ತೊಂದು ಕ್ಷೇತ್ರದಲ್ಲಿಯೂ ಸ್ಪರ್ಧಿಸುವಂತೆ ಕುಟುಂಬದ ಸದಸ್ಯರು ಸಲಹೆ ನೀಡಿದ್ದಾರೆ.
ವರುಣಾ ಟಿಕೆಟ್ ಅಂತಿಮಗೊಳಿಸುವಂತೆ ಪಕ್ಷಕ್ಕೆ ತಿಳಿಸಿದ್ದೇನೆ. ನಿರ್ಧಾರ ಹೈಕಮಾಂಡ್’ಗೆ ಬಿಟ್ಟದ್ದು ಎಂದರು.