ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕಮಾರ್ ತಿಳಿಸಿದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಶನಿವಾರ ಮಾತನಾಡಿದ ಅವರು, ಶೇ 95ರಷ್ಟು ಹಾಲಿ ಶಾಸಕರಿಗೇ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಸಂಧಾನ ಮಾತುಕತೆ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ ಎಂದು ತಿಳಿಸಿದರು.
ನಂಜನಗೂಡು ಕ್ಷೇತ್ರದಲ್ಲಿ ಆರ್. ಧ್ರುವನಾರಾಯಣ ಅವರು ಸ್ಪರ್ಧಿಸಬೇಕಿತ್ತು. ಆದರೆ, ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ ಎಂದರು.
ವಿರೋಧದ ನಡುವೆಯೂ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದ ಟಿಕೆಟ್ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ವಿಧಾನ ಪರಿಷತ್ ಸದಸ್ಯತ್ವ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಕೇಳಿದಾಗ, ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಪಕ್ಷ ಟಿಕೆಟ್ ನೀಡಿದೆ ಎಂದರು.
ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅನರ್ಹ: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ? ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯೇ ಎಂದೂ ಪ್ರಶ್ನಿಸಿದರು.
‘ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದೂ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.