ಮನೆ ಮನರಂಜನೆ ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ

ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ

0

ಮಂಗಳೂರು: ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ‘ಸರ್ಕಸ್’ ಚಿತ್ರದ ಮೊದಲ ಹಾಡು ಹೊಸ ರೀತಿಯಲ್ಲಿ ಚಿತ್ರ ಬಿಡುಗಡೆಯ ರೀತಿಯಲ್ಲೇ ಭಾರತ್ ಸಿನಿಮಾಸ್ ಥೀಯೇಟರ್ ನಲ್ಲಿ ಶನಿವಾರ ಬಿಡುಗಡೆಯಾಯಿತು.

ಈ ಬಗ್ಗೆ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ಮೊದಲ ಬಾರಿಗೆ ತುಳು ಚಿತ್ರದ ಹಾಡೊಂದು ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ. ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪ್ರೋತ್ಸಾಹ ನೀಡುತ್ತಿರುವುದು ಖುಷಿಯ ವಿಚಾರ. ಇಂದು ಹಾಡು ಬಿಡುಗಡೆ ಕಾರ್ಯಕ್ರಮಕ್ಕೆ ಆಗಮಿಸಿದ ರೀತಿಯಲ್ಲೇ ಜೂ.23ರಂದು ಬಿಡುಗಡೆಯಾಗಲಿರುವ ಸಿನಿಮಾವನ್ನು ನೋಡಿ ಬೆನ್ನುತಟ್ಟಿ ಪ್ರೋತ್ಸಾಹಿಸಿ” ಎಂದರು.

ಬಳಿಕ ಮಾತಾಡಿದ ಹಾಸ್ಯನಟ ಅರವಿಂದ್ ಬೋಳಾರ್ ಅವರು, “ಗಿರಿಗಿಟ್ ಚಿತ್ರದ ಬಳಿಕ ಮತ್ತೊಂದು ಸಂಪೂರ್ಣ ಹಾಸ್ಯಮಯ ಚಿತ್ರ ಇದಾಗಿದೆ. ಇದರಲ್ಲಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದು ಪ್ರೇಕ್ಷಕರು ಖಂಡಿತಾ ಇಷ್ಟಪಡಲಿದ್ದಾರೆ. ತುಳುವರು ತುಳು ಚಿತ್ರಗಳನ್ನು ಇಷ್ಟಪಟ್ಟು ನೋಡಿದರೆ ಸಿನಿಮಾ ಮಾಡಲು ಧೈರ್ಯ, ಉತ್ಸಾಹ ಬರುತ್ತದೆ” ಎಂದರು.