ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ರದ್ಧುಗೊಳಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕಾಂಗ್ರೆಸ್ ಕಚೇರಿ ಮುಂಭಾಗ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರುಗಳು ನಾನು ಗಾಂಧಿ, ಕ್ಷಮೆ ಕೇಳಲು ನಾವು ಸಾವರ್ಕರ್ ಅಲ್ಲ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್ ಮಾತನಾಡಿ, ರಾಹುಲ್ ಗಾಂಧಿ ಈ ದೇಶದ ಹೆಮ್ಮೆಯ ನಾಯಕ. ಭಾರತ್ ಜೋಡೋ ಯಾತ್ರೆ ಸಹಿಸಿಕೊಳ್ಳಲಾಗದ ಬಿಜೆಪಿಯವರು ರಾಹುಲ್ ಗಾಂಧಿಯನ್ನು ಹಣೆಯುವ ಕೆಲಸವನ್ನು ಮಾಡುತ್ತಿದ್ದಾರೆ. ಅದಾನಿಗೂ ಕೇಂದ್ರ ಸರ್ಕಾರಕ್ಕೂ ಏನು ಸಂಬಂಧ ಎಂಬುದನ್ನು ಬಹಿರಂಗಪಡಿಸಬೇಕು ಎಂಬ ರಾಹುಲ್ ಗಾಂಧಿ ಒತ್ತಾಯಕ್ಕೆ ಹೆದರಿ ಅವರನ್ನು ಹತ್ತಿಕ್ಕುವ ಕೆಲಸವನ್ನು ಮಾಡಿ ಸದಸ್ಯತ್ವವನ್ನು ರದ್ದುಗೊಳಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪುಷ್ಪವಲ್ಲಿ, ಮೈಸೂರು ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ ಟಿ.ಬಿ.ಚಿಕ್ಕಣ್ಣ, ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲತಾ ಸಿದ್ಧಶೆಟ್ಟಿ, ಕೆಪಿಸಿಸಿ ಮಹಿಳಾ ಪ್ರಧಾನಕಾರ್ಯದರ್ಶಿ, ರಾಧ, ಸುಶ್ಮಿತಾ, ಮಂಜಳಾ, ಜಯಲಕ್ಷ್ಮಿ ಪುತ್ರನ್, ಶೈಲಜಾ ಅಮರ್ ನಾಥ್, ಲತಾರಂಗನಾಥ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.