ನ್ಯಾಶ್‌ವಿಲ್ಲೆ(ಅಮೆರಿಕ): ಇಲ್ಲಿನ ಖಾಸಗಿ ಕ್ರಿಶ್ಚಿಯನ್ ಶಾಲೆಗೆ ನುಗ್ಗಿದ 28 ವರ್ಷದ ಯುವತಿಯೊಬ್ಬಳು ಗುಂಡಿನ ದಾಳಿ ನಡೆಸಿದ್ದಾಳೆ
ದಾಳಿಯಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ದಾಳಿ ನಡೆಸಿರುವ ಯುವತಿಯನ್ನು ಪೊಲೀಸರು ಗುಂಡಿಟ್ಟು ಸಾಯಿಸಿದ್ದಾರೆ. ಯುವತಿ ಈ ಕೃತ್ಯ ಎಸಗಿರುವುದಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ರೈಫಲ್ ಹಾಗೂ ಒಂದು ಪಿಸ್ತೂಲಿನೊಂದಿಗೆ ಬಂದ ಯುವತಿಯು ಗುಂಡಿನ ದಾಳಿ ನಡೆಸಿದ್ದಾಳೆ. ಈ ಶಾಲೆಯಲ್ಲಿ ನರ್ಸರಿಯಿಂದ ಆರನೇ ತರಗತಿ ವರೆಗಿನ ವಿದ್ಯಾರ್ಥಿಗಳು ಕಲಿಯುತ್ತಿದ್ದರು ಎಂದೂ ತಿಳಿಸಿದ್ದಾರೆ.
ಶಾಲೆಯನ್ನು ಸುತ್ತುವರಿದ ಶಸ್ತ್ರಧಾರಿ ಪೊಲೀಸರು ಉಳಿದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ ಎಂದೂ ಹೇಳಿದ್ದಾರೆ.