ಮನೆ ರಾಜಕೀಯ ನಮಗೆ ಹೊಂದಾಣಿಕೆ ಅಗತ್ಯವಿಲ್ಲ: ಸಿ.ಟಿ.ರವಿ

ನಮಗೆ ಹೊಂದಾಣಿಕೆ ಅಗತ್ಯವಿಲ್ಲ: ಸಿ.ಟಿ.ರವಿ

0

ಚಿಕ್ಕಮಗಳೂರು: ನಮಗೆ ಹೊಂದಾಣಿಕೆ ಅಗತ್ಯವಿಲ್ಲ, ಬಿಜೆಪಿ ಸ್ವತಂತ್ರವಾಗಿಯೇ ಸ್ಪರ್ಧೆ ಮಾಡುತ್ತದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.

ಇಂದು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ ಹೇಳಿದ್ದಾರೆ. ಹೀಗಿರುವಾಗ ಹೊಂದಾಣಿಕೆ ಎಲ್ಲಿಂದ. ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್.ಡಿ.ಕೆ. ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡ್ತಿರಲಿಲ್ಲ. ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು ಮತಗಳ ತೆಗೆದುಕೊಳ್ತಿದ್ರಾ ಎಂದು ಪ್ರಶ್ನಿಸಿದರು.

ವರುಣಾದಲ್ಲಿ ಸಿದ್ದು ವಿರುದ್ಧ ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದನ್ನು ಪಾರ್ಲಿಮೆಂಟರಿ ಬೋರ್ಡ್ ಸಿದ್ಧ ಪಡಿಸುತ್ತದೆ ಎಂದರು.

ನಾವು ಯಾರ ವಿರುದ್ಧವೂ ಹೇಳುತ್ತಿಲ್ಲ. ನಾವು ಬಿಜೆಪಿ ಪರ ಅಷ್ಟೆ, ನಮ್ಮದು ವೈಚಾರಿಕ ರಾಜಕೀಯ ಪಕ್ಷ, ನಮ್ಮ ಪಕ್ಷದ ವಿಚಾರವನ್ನು ಬೆಳೆಸುವುದಷ್ಟೆ ನಮ್ಮ ಗುರಿ. ನಮ್ಮದು ನಕಾರಾತ್ಮಕ ರಾಜಕೀಯ ಅಲ್ಲ, ಸಕಾರಾತ್ಮಕ ರಾಜಕೀಯ, ಪಕ್ಷ ಬೆಳೆಸುವುದು ನಮ್ಮ ಗುರಿ ಎಂದು ಹೇಳಿದರು.