ಮನೆ ಅಪರಾಧ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲಕ್ಷ ರೂ ಪೊಲೀಸರ ವಶಕ್ಕೆ

ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲಕ್ಷ ರೂ ಪೊಲೀಸರ ವಶಕ್ಕೆ

0

ಮಂಗಳೂರು: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 1.10 ಲಕ್ಷ ರೂ. ನಗದನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ.

ನಂತೂರು ಪೊಲೀಸ್ ಚೆಕ್ ಪಾಯಿಂಟ್ ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಇಯಾನ್ ಕಾರಿನ ಹಿಂಬದಿ ಸೀಟಿನಲ್ಲಿ ಕಪ್ಪು ಬಣ್ಣದ ಸ್ಕೂಲ್ ಬ್ಯಾಗ್ ನಲ್ಲಿ ಹಣ ಪತ್ತೆಯಾಗಿದೆ.

ಕಾರಿನಲ್ಲಿದ್ದ ಕಾಸರಗೋಡಿನ ಅನಿಲ್ (35), ಶಮೀಲ್ (38) ಎಂಬವರನ್ನು ವಿಚಾರಿಸಿದಾಗ ಯಾವುದೇ ದಾಖಲೆಪತ್ರ ಹಾಗೂ ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.