ಮನೆ ಅಪರಾಧ ಕಾರು, ಬೈಕ್ ನಡುವೆ ಅಪಘಾತ: ಇಬ್ಬರ ಸಾವು

ಕಾರು, ಬೈಕ್ ನಡುವೆ ಅಪಘಾತ: ಇಬ್ಬರ ಸಾವು

0

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರೀಕರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಬಳಿ ನಡೆದಿದೆ.

ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ ಮತ್ತು ಅಜೀಮ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಇವರಿಬ್ಬರನ್ನು  ಕೂಡಲೇ ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಅಪಘಾತದ ಸ್ಥಳಕ್ಕೆ ತರೀಕರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.