ಮನೆ ರಾಜ್ಯ ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು

0

ಉಪ್ಪಿನಂಗಡಿ: ದೈವನರ್ತನ ಮಾಡುತ್ತಿರುವಾಗಲೇ ದೈವನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕಡಬ ತಾಲ್ಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನಡೆದಿದೆ.

ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು– 55ವ) ಮೃತರು.

ಅವರು ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಗುರುವಾರ ನಸುಕಿನ ಜಾವ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದರು.

ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ ನಲ್ಲಿ ಸೆರೆಯಾಗಿದೆ.