ಚಿಕ್ಕಮಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಶಾಸಕ ಎಂ.ಪಿ ಕುಮಾರಸ್ವಾ ವಿರುದ್ಧ ಹೂವಪ್ಪಗೌಡ ಎಂಬುವವರು ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಸಾಲದ ರೂಪದಲ್ಲಿ 1ಕೋಟಿ 38 ಲಕ್ಷದ 65 ಸಾವಿರ ರೂ. ಹಣ ಪಡೆದು ವಂಚನೆ ಮಾಡಿದ್ದಾರೆಂದು ಆರೋಪಿಸಿದ್ದರು. ಶಾಸಕ ಕುಮಾರಸ್ವಾಮಿ ನೀಡಿದ್ದ 8 ಚೆಕ್ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ದೂರು ದಾಖಲಿಸಿದ್ದರು.
30 ದಿನದೊಳಗೆ ಹಣ ಮರುಪಾವತಿ ಮಾಡುವಂತೆ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಕೋರ್ಟ್ ಸೂಚನೆ ನೀಡಿತ್ತು. ಆದರೆ ಹಣ ಮರುಪಾವತಿಸದ ಹಿನ್ನೆಲೆ ಬಂಧನಕ್ಕೆ ಆದೇಶಿಸಿದೆ.