ಮನೆ ರಾಷ್ಟ್ರೀಯ ಮೊಸರು ಪ್ಯಾಕೇಟ್ ಮೇಲೆ ‘ದಹಿ’ ಪದ ಬಳಕೆಗೆ ವ್ಯಾಪಕ ವಿರೋಧ: ಆದೇಶ ಹಿಂಪಡೆದ ಎಫ್‌’ಎಸ್‌’ಎಸ್‌’ಎಐ

ಮೊಸರು ಪ್ಯಾಕೇಟ್ ಮೇಲೆ ‘ದಹಿ’ ಪದ ಬಳಕೆಗೆ ವ್ಯಾಪಕ ವಿರೋಧ: ಆದೇಶ ಹಿಂಪಡೆದ ಎಫ್‌’ಎಸ್‌’ಎಸ್‌’ಎಐ

0

ಬೆಂಗಳೂರು: ಮೊಸರು ಪ್ಯಾಕೆಟ್‌ ಮೇಲೆ ಹಿಂದಿ ಪದ ‘ದಹಿ’ ಎಂದು ನಮೂದಿಸುವಂತೆ ಹೊರಡಿಸಿದ್ದ ನಿರ್ದೇಶನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌’ಎಸ್‌’ಎಸ್‌’ಎಐ) ತನ್ನ ಆದೇಶವನ್ನು ಗುರುವಾರ ಹಿಂಪಡೆದಿದೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಎಫ್‌’ಎಸ್‌’ಎಸ್‌’ಐ ನಿರ್ದೇಶನಕ್ಕೆ ವಿರೋಧ ವ್ಯಕ್ತವಾಗಿತ್ತು. ಜೆಡಿಎಸ್ ಮತ್ತು ಕಾಂಗ್ರೆಸ್‌ ಹಾಗೂ ಹಲವು ಕನ್ನಡ ಸಂಘಟನೆಗಳು ಆದೇಶ ವಾಪಸ್‌ ಪಡೆಯುವಂತೆ ಒತ್ತಾಯಿಸಿದ್ದವು.

ಎಫ್‌’ಎಸ್‌’ಎಸ್‌’ಎಐ ಗುರುವಾರ ತನ್ನ ಆದೇಶವನ್ನು ಪರಿಷ್ಕರಿಸಿದ್ದು, ಪ್ರಾದೇಶಿಕ ಭಾಷೆಗಳನ್ನು ಪ್ಯಾಕೆಟ್‌ ಮೇಲೆ ಮುದ್ರಿಸಲು ಅವಕಾಶ ಕಲ್ಪಿಸಿದೆ.

ಇಂಗ್ಲಿಷ್‌ ಜತೆ ಯಾವುದೇ ಪ್ರಾದೇಶಿಕ ಭಾಷೆಯನ್ನು ಬಳಸಬಹುದಾಗಿದೆ. ಉದಾಹರಣೆಗೆ ಇಂಗ್ಲಿಷ್‌ ನಲ್ಲಿ curd ಜತೆ ಹಿಂದಿಯಲ್ಲಿ ದಹಿ, ಕನ್ನಡದಲ್ಲಿ ಮೊಸರು, ತಮಿಳಿನಲ್ಲಿ ಥೈರ್, ತೆಲುಗಿನಲ್ಲಿ ಪೆರುಗು ಎಂದು ಆವರಣದಲ್ಲಿ ಬಳಸಬಹುದಾಗಿದೆ.

ಕರ್ನಾಟಕ ಮತ್ತು ತಮಿಳುನಾಡಿನ ಹಾಲು ಒಕ್ಕೂಟಗಳಿಗೆ ಮಾರ್ಚ್‌ 10ರಂದು ನಿರ್ದೇಶನ ನೀಡಿದ್ದ ಎಫ್‌’ಎಸ್‌’ಎಸ್‌’ಎಐ, ‘ದಹಿ’ ಎನ್ನುವ ಶಬ್ದವನ್ನೇ ಬಳಸಬೇಕು. ಆವರಣದಲ್ಲಿ ಮಾತ್ರ ಪ್ರಾದೇಶಿಕ ಭಾಷೆಯನ್ನು ನಮೂದಿಸುವಂತೆ ಸೂಚಿಸಿತ್ತು. ಉದಾಹರಣೆಗೆ ದಹಿ(ಮೊಸರು), ದಹಿ (ಪೆರುಗು) ಎಂದು ಆವರಣದಲ್ಲಿ ನಮೂದಿಸುವಂತೆ ಸೂಚಿಸಿತ್ತು. ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ಹಾಗೂ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲಾ ಹಾಲು ಒಕ್ಕೂಟಗಳಿಗೆ (ಬಮುಲ್‌) ಹಾಗೂ ತಮಿಳುನಾಡು ಸಹಕಾರ ಹಾಲು ಒಕ್ಕೂಟ ಮತ್ತು ಹ್ಯಾಟ್ಸನ್‌ ಆಗ್ರೊ ಪ್ರಾಡಕ್ಟ್ಸ್‌ ಸಂಸ್ಥೆಗಳಿಗೆ ಈ ಬಗ್ಗೆ ನಿರ್ದೇಶನವನ್ನು ನೀಡಲಾಗಿತ್ತು.

ತಮಿಳುನಾಡು ಸಹಕಾರ ಹಾಲು ಉತ್ಪಾದಕರ ಒಕ್ಕೂಟವು ಹಿಂದಿಯ ’ದಹಿ’ ಶಬ್ದ ಬಳಸಲು ನಿರಾಕರಿಸಿತ್ತು. ತಮಿಳು ಶಬ್ದ ‘ಥಯಿರ್‌’ ಮಾತ್ರ ಬಳಸುವುದಾಗಿ ತಿಳಿಸಿತ್ತು.