ಮನೆ ಸುದ್ದಿ ಜಾಲ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ ಪರಿಶೀಲಿಸಿ: ಡಾ ಕೆ.ವಿ. ರಾಜೇಂದ್ರ

ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದರೆ ಪರಿಶೀಲಿಸಿ: ಡಾ ಕೆ.ವಿ. ರಾಜೇಂದ್ರ

0

ಮೈಸೂರು: ಬಸ್ ನಿಲ್ದಾಣಗಳಲ್ಲಿ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಕಣ್ಗಾವಲು ತಪಾಸಣಾ ಕೇಂದ್ರವನ್ನು ಸ್ಥಾಪಿಸಿ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ಅನುಮಾನ ವ್ಯಕ್ತಿಗಳ ಮೇಲೆ ಪರಿಶೀಲನೆ ನಡೆಸಿ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ಚುನಾವಣಾ ಸಂಬಂಧ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸ್ಗಳ ಮೇಲೆ ಇರುವ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು ಕೂಡಲೇ ತೆರವುಗೊಳಿಸಿ. ಸಿಟಿ ಬಸ್ ಸ್ಟ್ಯಾಂಡ್ ಸಬರ್ ಬಸ್ ಸ್ಟ್ಯಾಂಡ್ ಗಳಲ್ಲಿ ಚೆಕ್ ಪೋಸ್ಟ್ಗಳನ್ನು ತೆರೆದು ಪರಿಶೀಲನೆ ನಡೆಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

14 ರೈಲ್ವೆ ಸ್ಟೇಷನ್ ಗಳಲ್ಲಿ ಟ್ರೈನ್ ಗಳು ಬರುವ ಸಮಯದ ಆಧಾರದ ಮೇಲೆ ಬೋರ್ಡಿಂಗ್ ಸಮಯದಲ್ಲಿ ಸ್ಟೇಷನ್ ಅಧಿಕಾರಿಗಳು ಪರಿಶೀಲನೆ ನಡೆಸಲು ಕ್ರಮ ವಹಿಸಬೇಕು.  ರೈಲ್ವೆ ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಚೆಕ್ಪೋಪೋಸ್ಟ್ ಳನ್ನು ಸ್ಥಾಪಿಸಿ ಶಿಫ್ಟ್ ಆಧಾರದ ಮೇಲೆ ಕೆಲಸ ನಿರ್ವಹಿಸಬೇಕು. ಮೈಸೂರು ವಿಮಾನ ನಿಲ್ದಾಣದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ಚಾಪರ್, ಹೆಲಿಕ್ಯಾಪ್ಟರ್ ವಿಮಾನಗಳಲ್ಲಿ ಆಗಮಿಸುವ ಪ್ರವಾಸಿಗರನ್ನು ಪರಿಶೀಲನೆ ನಡೆಸಬೇಕು.  ಕೆಎಸ್ಆರ್ ಟಿಸಿ ಚಾಲಕರು ಹಾಗೂ ನಿರ್ವಾಹಕರಿಗೆ ಮನವರಿಕೆ ಮಾಡಬೇಕು. ಈ ಮೂಲಕ ಚೆಕ್ ಪೋಸ್ಟ್ ಗಳಲ್ಲಿ ಬಸ್ ಗಳ ಪರಿಶೀಲನೆ ಮಾಡಲು ಅವರು ಸಹಕರಿಸುವಂತೆ ಸೂಚಿಸಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರಣಕ್ಕೆ ಮತದಾನದಿಂದ ಹೊರಗುಳಿಯುವಂತಿಲ್ಲ. ತಪ್ಪದೇ ಎಲ್ಲಾ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಮತದಾನದಲ್ಲಿ ಭಾಗವಹಿಸುವಂತೆ ಹಾಗೂ ಶೇ. ನೂರರಷ್ಟು ಮತದಾನ ವಾಗುವಂತೆ ಕ್ರಮವಹಿಸಿ ಎಂದು ತಿಳಿಸಿದರು.

ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆಎಮ್ ಗಾಯತ್ರಿ, ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್, ಉಪವಿಭಾಗಾಧಿಕಾರಿಗಳಾದ ಕಮಲಾ ಭಾಯಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.