ಮನೆ ಸುದ್ದಿ ಜಾಲ ಅರ್ಥಪೂರ್ಣವಾಗಿ ಬಾಬು ಜಗಜೀವನ ರಾಮ್,  ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ  ಆಚರಿಸಿ:  ಡಾ ಕೆ.ವಿ.ರಾಜೇಂದ್ರ

ಅರ್ಥಪೂರ್ಣವಾಗಿ ಬಾಬು ಜಗಜೀವನ ರಾಮ್,  ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ  ಆಚರಿಸಿ:  ಡಾ ಕೆ.ವಿ.ರಾಜೇಂದ್ರ

0

ಮೈಸೂರು: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ನೀತಿ ಸಂಹಿತೆಗೆ ಅಡ್ಡಿಯಾಗದಂತೆ ಬಾಬು ಜಗಜೀವನ ರಾಮ್ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಗಳನ್ನುಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 5 ರಂದು ಡಾ.ಬಾಬು ಜಗಜೀವನ ರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಯಂತಿಗಳು ನಡೆಯುವ ದಿನಗಳಂದು ಯಾವುದೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಕರೆತಂದು ಭಾಷಣ ಮಾಡಿಸಬಾರದು ಹಾಗೂ ಭಾಷಣಕಾರರು ರಾಜಕೀಯವಾಗಿ ಮಾತನಾಡಬಾರದು ಎಂದು ಸೂಚಿಸಿದರು.

ಮಹಾನ್ ವ್ಯಕ್ತಿಗಳ ಜಯಂತಿಯನ್ನು ಕೇವಲ ಒಂದು ವರ್ಗ ಮತ್ತು ಒಂದು ಸ್ಥಳಕ್ಕೆ ಸೀಮಿತ ಮಾಡಬಾರದು. ಜಯಂತಿಗಳ ದಿನದಂದು ಮಹಾನ್ ವ್ಯಕ್ತಿಗಳ ತತ್ವ ಹಾಗೂ ಆದರ್ಶಗಳ ಬಗ್ಗೆ ಎಲ್ಲರೂ ಅರಿಯಬೇಕು. ಸರ್ಕಾರಿ ಎಲ್ಲಾ ಅಧಿಕಾರಿಗಳು ಖುದ್ದು ಹಾಜರಿದ್ದು ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು. ಮಹಾನ್ ವ್ಯಕ್ತಿಗಳ ಪುತ್ಧಳಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ, ಪ್ರತಿದಿನ ಆಚರಣೆ ಮಾಡಬೇಕು ಎಂದು ತಿಳಿಸಿದರು.

ಸಭೆಯಲ್ಲಿ  ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮಿಕಾಂತ್ ರೆಡ್ಡಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರ್ಗಳಾದ ಗಾಯಿತ್ರಿ, ಎಡಿಸಿ ಕವಿತಾ ರಾಜರಾಂ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ, ಸೇರಿದಂತೆ ಸಮುದಾಯದ ಮುಖಂಡರುಗಳು ಹಾಗೂ ಇನ್ನಿತರರು ಹಾಜರಿದ್ದರು.