ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸೋರಿಕೆಯಾದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.
ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು.
ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ದೃಢಪಟ್ಟಿಲ್ಲ ಎಂದು ಎಂ.ಎನ್.ಪ್ಯಾಟಿ ತಿಳಿಸಿದರು.
ಕೆ ಸುಧಾಕರ್ ಗೆ ಗಂಡಾಂತರ.
ಕಾಂಗ್ರೆಸ್ ಕಾರ್ಯಕರ್ತರಿಗೆ ಐಟಿ ಕಿರುಕುಳ
ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆ ದ್ವಂಸ
ಏಪ್ರಿಲ್ 26ಕ್ಕೆ ಮೊದಲ ಹಂತದ ಚುನಾವಣೆ……
'ಕೈ' ಪರ ಪ್ರಚಾರದಲ್ಲಿದ್ದಾಗ ತಡೆದ ಬಿಜೆಪಿ ಕಾರ್ಯಕರ್ತರು….
ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರಿಗೆ ರಾಪಿಡೋ ವತಿಯಿಂದ ಸಿಹಿ ಸುದ್ದಿ
ಏಪ್ರಿಲ್ 26ಕ್ಕೆ ಏನೆಲ್ಲ ಲಭ್ಯವಿರುತ್ತದೆ….
ಲಂಡನ್ನಲ್ಲಿ ಅನಂತ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ಮದುವೆ.
ಲೋಕಸಭಾ ಚುನಾವಣೆಗೆ ಬೆಂಗಳೂರಿನಲ್ಲಿ ನಿಷೇಧಾಗ್ನೆ ಜಾರಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.