ಮನೆ ರಾಷ್ಟ್ರೀಯ ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ: ಐವರು ನಕ್ಸಲರ ಹತ್ಯೆಗೈದ ಭದ್ರತಾ ಪಡೆ

ಜಾರ್ಖಂಡ್ ನಲ್ಲಿ ಗುಂಡಿನ ಚಕಮಕಿ: ಐವರು ನಕ್ಸಲರ ಹತ್ಯೆಗೈದ ಭದ್ರತಾ ಪಡೆ

0

ಜಾರ್ಖಂಡ್ (ಪಿಟಿಐ): ಛತ್ರಾ ಜಿಲ್ಲೆಯ ಲಲಾಂಗ್‌ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ಮಧ್ಯೆ ಸೋಮವಾರ ನಡೆದ ಭಾರಿ ಗುಂಡಿನ ಚಕಮಕಿಯಲ್ಲಿ ಐದು ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.

ರಾಜಧಾನಿ ರಾಂಚಿಯಿಂದ 160 ಕಿ.ಮೀ ದೂರದಲ್ಲಿರುವ ಲಾಲಾಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಛತ್ರಾ-ಪಲಮು ಗಡಿಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಘಟನೆಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಕಾರ್ಯಾಚರಣೆ ನಡೆಸಲಾಗಿತ್ತು. ಈ ಪ್ರದೇಶದಲ್ಲಿ ನಕ್ಸಲರು ಹೆಚ್ಚಿನ ಸಂಖ್ಯೆಯಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.

ಘಟನಾ ಸ್ಥಳದಿಂದ ಎರಡು ಎಕೆ -47 ಗನ್‌ ಗಳು, ನಾಡ ಪಿಸ್ತೂಲುಗಳು ಸೇರಿದಂತೆ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.