ಮನೆ ಆರೋಗ್ಯ ರಾಜ್ಯದಲ್ಲಿ ಇಂದು 106 ಮಂದಿಗೆ ಕೊರೊನಾ ಪಾಸಿಟಿವ್

ರಾಜ್ಯದಲ್ಲಿ ಇಂದು 106 ಮಂದಿಗೆ ಕೊರೊನಾ ಪಾಸಿಟಿವ್

0

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 106 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,44,432ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40033 ಏರಿಕೆಯಾಗಿದೆ.  ಬೆಂಗಳೂರಿನಲ್ಲಿ ಇಂದು 84 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,80,778ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 154 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,02,344ಕ್ಕೆ ಏರಿಕೆಯಾಗಿದೆ. ಇನ್ನು 2013 ಸಕ್ರಿಯ ಪ್ರಕರಣಗಳಿವೆ.