ಮನೆ ಅಪರಾಧ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ: ದೂರು ದಾಖಲು

ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ: ದೂರು ದಾಖಲು

0

ಬೆಂಗಳೂರು: ಸ್ಯಾಂಡಲ್ ​ವುಡ್ ನಟ ಕಿಚ್ಚ ಸುದೀಪ್​ಗೆ ಬೆದರಿಕೆ ಪತ್ರವೊಂದು ಬಂದಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

Join Our Whatsapp Group

ಕಿಚ್ಚ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಬೆದರಿಕೆ ಪತ್ರದ ಸಮೇತ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಅನ್ವಯ ಐಪಿಸಿ 504, 506 ಹಾಗೂ ಐಟಿ ಆಕ್ಟ್ ಅಡಿ ಕೇಸ್ ದಾಖಲಿಸಲಾಗಿದೆ.

ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಿ, ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್​ ನಲ್ಲಿ ಬರೆದಿರುವುದು ತಿಳಿದು ಬಂದಿದೆ.

ಕಿಚ್ಚ ಸುದೀಪ್‌ ಬುಧವಾರ ಬಿಜೆಪಿ ಸೇರಿ, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿದೆ. ಇದರ ನಡುವೆಯೇ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಪತ್ರ ಬಂದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.