ಗುತ್ತಿಗಾರು: ಕೋಳಿ ಪದಾರ್ಥಕ್ಕೆ ಸಂಬಂಧಿಸಿ ಜಗಳ ವಿಕೋಪಕ್ಕೆ ತಿರುಗಿ ತಂದೆಯೇ ಮಗನನ್ನು ಕೊಂದ ಘಟನೆ ಕಳೆದ ರಾತ್ರಿ ಗುತ್ತಿಗಾರು ಗ್ರಾಮದ ಮೊಗ್ರ ಏರಣಗುಡ್ಡೆ ಬಳಿ ನಡೆದಿದೆ.
ಶಿವರಾಮ(32) ಮೃತ ದುರ್ದೈವಿ. ಮೊಗ್ರ ಏರಣಗುಡ್ಡೆಯ ಮಾತೃ ಮಜಲು ನಿವಾಸಿ ಶೀನ ಮಗನನ್ನು ಕೊಂದ ತಂದೆ
ನಿನ್ನೆ ರಾತ್ರಿ 12 ಗಂಟೆಗೆ ಕೋಳಿ ಪದಾರ್ಥದ ವಿಚಾರವಾಗಿ ಜಗಳ ಆರಂಭವಾಗಿದೆ. ಶಿವರಾಮ ರಾತ್ರಿ ಮನೆಗೆ ಬರುವಾಗ ಕೋಳಿ ಪದಾರ್ಥ ಖಾಲಿ ಆಗಿತ್ತೆನ್ನಲಾಗಿದೆ. ಇದನ್ನು ಆಕ್ಷೇಪಿಸಿ ಆತ ಮಾತನಾಡತೊಡಗಿದಾಗ ತಂದೆ ಶೀನರಿಗೂ ಆತನಿಗೂ ಜಗಳ ಆರಂಭವಾಯಿತು. ಕೋಪಗೊಂಡ ಶೀನ ಬಡಿಗೆಯಿಂದ ಮಗನ ತಲೆಗೆ ಹೊಡೆದರೆನ್ನಲಾಗಿದೆ. ಏಟು ಬಲವಾಗಿ ಬಿದ್ದು ತಲೆಯ ಬುರುಡೆ ಒಡೆಯಿತು. ಪರಿಣಾಮವಾಗಿ ಶಿವರಾಮ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಗಿ ವರದಿಯಾಗಿದೆ.
ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ಶೀನನನ್ನು ಬಂಧಿಸಿದ್ದಾರೆ. ಶಿವರಾಮರ ಮೃತ ದೇಹವನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.