ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ತಿಳಿಸಿದರು.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಷ್ಟದ ದಿನಗಳಲ್ಲಿ ನನ್ನ ಜೊತೆಗೆ ನಿಂತಿದ್ದು ಸಿಎಂ ಬೊಮ್ಮಾಯಿಯವರು. ನಾನು ಚಿಕ್ಕವಯಸ್ಸಿನಿಂದ ಅವರನ್ನು ನೋಡಿದ್ದೇನೆ. ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನ ಪರ ನಿಂತಿದ್ದರು. ಅಂತಹವರು ನನ್ನ ಮಾಮ ಸಿಎಂ ಬೊಮ್ಮಾಯಿ. ನಾನು ಅವರ ಪರವಾಗಿ ನಿಲ್ಲಲು ಬಂದೆ ಎಂದಿದ್ದಾರೆ.
ನಾನು ಚಿತ್ರರಂಗ ಪ್ರವೇಶಿಸುವಾಗ ಗಾಡ್ ಫಾದರ್ ಅಂತ ಯಾರು ಇರಲಿಲ್ಲ. ಆ ಟೈಮ್ ನಲ್ಲಿ ಅವರು ನನ್ನ ಪರ ಇದ್ದರು. ಹೀಗಾಗಿ ನಾನು ಆ ವ್ಯಕ್ತಿ ಪರ ಬೆಂಬಲ ಕೊಡೋಕೆ ಬಂದಿದ್ದೀನಿ. ಹಾಗೆ ಕೆಲ ಸ್ನೇಹಿತರು ಇದ್ದಾರೆ. ಅವರ ಪರವೂ ನಿಲ್ಲುತ್ತೇನೆ ಎಂದು ತಿಳಿಸಿದರು.
ನನ್ನ ಲೈಫ್ ನಲ್ಲಿ ಬೊಮ್ಮಾಯಿಯವರು ಒಳ್ಳೆಯ ಸ್ಥಾನದಲ್ಲಿದ್ದಾರೆ. ಅವರು ಎಲ್ಲಿ ಹೇಳುತ್ತಾರೋ ಅಲ್ಲಿ ಕೆಲಸ ಮಾಡಲು ಸಿದ್ಧನಿದ್ದೇನೆ. ತಯಾರಿದ್ದೇನೆ. ಬೊಮ್ಮಾಯಿ ಬೇರೆ ಪಕ್ಷದಲ್ಲಿದ್ದರೂ ಅವರ ಜೊತೆ ನಾನು ನಿಲ್ಲುತ್ತಿದ್ದೆ. ನಾನು ಸಿಎಂ ಬೊಮ್ಮಾಯಿ ಅವರ ವಿಷಯದಲ್ಲಿ ಪಕ್ಷ ನೋಡುತ್ತಿಲ್ಲ, ವ್ಯಕ್ತಿ ನೋಡುತ್ತೇನೆ ಎಂದರು.
ನನಗೆ ಎಲ್ಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಆಗಲ್ಲ. ಪಕ್ಷ ಅಂತಾ ಇಲ್ಲಿಗೆ ಬಂದಿಲ್ಲ, ವ್ಯಕ್ತಿಯ ಕಾಳಜಿಗೆ ಬಂದಿದ್ದೇನೆ. ಹಣಕ್ಕಾಗಿ ನಾನು ಚುನಾವಣಾ ಪ್ರಚಾರ ಮಾಡುತ್ತಿಲ್ಲ. ಸಿಎಂ ಬೊಮ್ಮಾಯಿ ಅವರಿಗೆ ಮಾತ್ರ ನನ್ನ ಬೆಂಬಲ ಎಂದು ಸ್ಪಷ್ಟಪಡಿಸಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.