ಮನೆ ರಾಜಕೀಯ ನಾಳೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಹೆಚ್.ಡಿ ಕುಮಾರಸ್ವಾಮಿ

ನಾಳೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ: ಹೆಚ್.ಡಿ ಕುಮಾರಸ್ವಾಮಿ

0

ಬೆಂಗಳೂರು: ನಾಳೆಯೇ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Join Our Whatsapp Group

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಪಿರಿಯಾಪಟ್ಟಣದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ. ಯಾತ್ರೆ ಮುಗಿಸಿ ಸಂಜೆ ಬೆಂಗಳೂರಿಗೆ ಹಿಂದಿರುಗಲಿದ್ದೇನೆ.  ಬಳಿಕ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡುತ್ತೇನೆ ಎಂದರು.

ಹಾಸನ ಅಭ್ಯರ್ಥಿಯೂ  ವಿಚಾರವು ನಾಳೆಯೇ ಅಂತಿಮವಾಗಲಿದೆ. ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ನಾಳೆಯೇ ಎಲ್ಲಾ ಫೈನಲ್ ಆಗಲಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.