ಮನೆ ಅಪರಾಧ ದ್ವೇಷ ಭಾಷಣ: ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲು

ದ್ವೇಷ ಭಾಷಣ: ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲು

0

ಬೆಂಗಳೂರು: ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ತೋಟಗಾರಿಕೆ ಸಚಿವ ವಿ. ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿದೆ.

Join Our Whatsapp Group

ಈ ಸಂಬಂಧ ಗೆಜೆಟೆಡ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರ ಜನರು ನಡುವೆ ದ್ವೇಷವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ “ಕ್ರೈಸ್ತರು ಈ ಕ್ಷಣದಲ್ಲಿಯೂ ಜನರನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಕೊಳೆಗೇರಿಗಳಲ್ಲಿ ಮತಾಂತರ ಗರಿಷ್ಠವಾಗಿದೆ.  1,400 ಜನರಿರುವ ಇಂತಹ  ಸ್ಥಳಗಳಲ್ಲಿ 400 ಮಂದಿ ಮತಾಂತರಗೊಂಡಿದ್ದಾರೆ. ಕ್ರಿಶ್ಚಿಯನ್ನರು ಮತಾಂತರ ಮಾಡಲು ಬಂದರೆ ಅವರನ್ನು ಹೊರಹಾಕಿ ಇಲ್ಲವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಂದು ಮುನಿರತ್ನ ಹೇಳಿದ್ದರು.

ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 117 (ಅಪರಾಧಕ್ಕೆ ಪ್ರಚೋದನೆ), 153A (ವಿವಿಧ ಗುಂಪುಗಳು ಅಥವಾ ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು ಜನತಾ ಪ್ರಾತಿನಿಧ್ಯ ಕಾಯ್ದೆ (ಚುನಾವಣೆಗೆ ಸಂಬಂಧಿಸಿದಂತೆ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು)ಅಡಿಯಲ್ಲಿ ರಾಜರಾಜೇಶ್ವರಿನಗರ ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.