ಮನೆ ರಾಜ್ಯ ಮೈಸೂರು: ಅಬ್ದುಲ್ ಅಜೀಜ್ ಜೆಡಿಎಸ್‌ ಗೆ ರಾಜೀನಾಮೆ

ಮೈಸೂರು: ಅಬ್ದುಲ್ ಅಜೀಜ್ ಜೆಡಿಎಸ್‌ ಗೆ ರಾಜೀನಾಮೆ

0

ಮೈಸೂರು: ನರಸಿಂಹರಾಜ ಕ್ಷೇತ್ರದಿಂದ ಟಿಕೆಟ್ ನಿರೀಕ್ಷಿಸಿದ್ದ ಮುಖಂಡ ಅಬ್ದುಲ್ ಅಜೀಜ್ ಜೆಡಿಎಸ್‌ ಗೆ ರಾಜೀನಾಮೆ ನೀಡಿದ್ದಾರೆ. ಇದು ಚುನಾವಣೆ ಹೊಸ್ತಿಲಲ್ಲಿ ಪಕ್ಷಕ್ಕೆ ಆಘಾತ ನೀಡಿದೆ.

Join Our Whatsapp Group

ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯ ಘಟಕದ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಪತ್ರವನ್ನು ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಸಲ್ಲಿಸಿದ್ದಾರೆ.

ಪಕ್ಷವು ಈ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಚುನಾವಣಾ ಕಣಕ್ಕಿಳಿಯಲು ಬಯಸಿ ಸಂಘಟನೆಯಲ್ಲಿ ತೊಡಗಿದ್ದರೂ ಮೊದಲನೇ ಪಟ್ಟಿಯಲ್ಲಿ ಹೆಸರು ಘೋಷಣೆ ಮಾಡದಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018ರ ಚುನಾವಣೆಯಲ್ಲಿ ಜೆಡಿಎಸ್‌ ನಿಂದ ಸ್ಪರ್ಧಿಸಿ ಪರಾಭವಗೊಂಡರೂ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೆ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಹಲವು ಕಡೆಗಳಲ್ಲಿ ಸಂಚರಿಸಿ ಕೆಲಸ ಮಾಡಿದ್ದೆ. ಆದರೂ ಪಕ್ಷದಲ್ಲಿ ಬೆಲೆ ಸಿಗುತ್ತಿಲ್ಲ. ನಾಯಕರ ನಡೆಯಿಂದ ಬೇಸರಗೊಂಡು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಚರ್ಚಿಸಿದ್ದಾರೆ. ಶೀಘ್ರದಲ್ಲೇ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ್ದೇನೆ. ಕಾಂಗ್ರೆಸ್‌ ಗೆ ಸೇರುವ ಕುರಿತು ಏ.10ರಂದು ಬೆಂಬಲಿಗರ ಸಭೆ ಕರೆದು ನಿರ್ಧರಿಸುತ್ತೇನೆ ಎಂದು ಅವರು ಪ್ರತಿಕ್ರಿಯಿಸಿದರು.