ಕಲಬುರಗಿ: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಲ್ಲಿ ಸ್ಕೂಲ್ ಬ್ಯಾಗ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೈಯದ್ ಅಬ್ದುಲ್ ಮನಾನ್ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ.
ಸೈಯದ್ ಅಬ್ದುಲ್ ಮನಾನ್ ಗಾಂಜಾ ಕೆಕೆಆರ್ ಟಿಸಿ ಬಸ್ ನಲ್ಲಿ ಎಂಟು ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ, ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














