ಮನೆ ಆರೋಗ್ಯ ದೇಶದಲ್ಲಿಂದು 1,549 ಹೊಸ ಕೇಸ್ ಪತ್ತೆ

ದೇಶದಲ್ಲಿಂದು 1,549 ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿ ಸೋಮವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ ಕೇವಲ 1,549 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,30,09,390ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,16,312ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 25,106ಕ್ಕೆ ಇಳಿಕೆಯಾಗಿದೆ

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,196 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,24,65,122ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 4,31,973 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 78,26,60,658 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,81,24,97,303 ಜನರಿಗೆ ಲಸಿಕೆಯನ್ನು ನೀಡಲಾಗಿದೆ.