ಮನೆ ಸುದ್ದಿ ಜಾಲ ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಐವರಿಗೆ ಗಾಯ

ಚಾರ್ಮಾಡಿ ಘಾಟಿಯಲ್ಲಿ ಕಂದಕಕ್ಕೆ ಉರುಳಿದ ಕಾರು: ಐವರಿಗೆ ಗಾಯ

0
ಬೆಳ್ತಂಗಡಿ (ದಕ್ಷಿಣ ಕನ್ನಡ): ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಭಾನುವಾರ ರಾತ್ರಿ ಕಾರೊಂದು ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಐವರು ಗಾಯಗೊಂಡಿದ್ದಾರೆ.

Join Our Whatsapp Group

ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ, ಅವರ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ಧ ಹಾಗೂ ಸಂಬಂಧಿ ಸರೋಜಿನಿ ಶೆಟ್ಟಿ ಹಾಗೂ ಚಾಲಕ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕೊಪ್ಪದಲ್ಲಿ ನಿಧನರಾದ ಸಂಬಂಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದ್ದು, ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.