ಮನೆ ಆರೋಗ್ಯ ಕೋವಿಡ್-19: 5,888 ನೂತನ ಕೋವಿಡ್ ಪ್ರಕರಣ ಪತ್ತೆ

ಕೋವಿಡ್-19: 5,888 ನೂತನ ಕೋವಿಡ್ ಪ್ರಕರಣ ಪತ್ತೆ

0
ನವದೆಹಲಿ: ದೇಶದಲ್ಲಿ ಒಂದೇ ದಿನ 5,888 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 35,199ಕ್ಕೆ ಏರಿಕೆಯಾಗಿದೆ 
ಎಂದು ಕೇಂದ್ರ ಆರೋಗ್ಯ ಇಲಾಖೆ ಸೋಮವಾರ ಪ್ರಕಟಿಸಿದೆ. 
ಸೋಂಕಿನಿಂದ 14 ಜನರು ಮೃತಪಟ್ಟ ವರದಿಯಾಗಿದೆ. ಇದರಲ್ಲಿ ದೆಹಲಿ, ಹಿಮಾಚಲ ಪ್ರದೇಶ, ಗುಜರಾತ್, ಜಮ್ಮು–ಕಾಶ್ಮೀರ, ಮಹಾರಾಷ್ಟ್ರ, ರಾಜಸ್ಥಾನ, ಕೇರಳದಲ್ಲಿ ಸಾವಿನ ಪ್ರಕರಣಗಳು ದಾಖಲಾಗಿದೆ.
ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ 6.91ರಷ್ಟಿದ್ದು, ಮರಣ ಪ್ರಮಾಣ ಶೇ 1.1 ಆಗಿದೆ. ಹಾಗೂ, ಚೇತರಿಕೆ ಶೇ 98.73ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.