ಮನೆ ಸುದ್ದಿ ಜಾಲ ಮಕ್ಕಳಿಗೆ ಧಾರ್ಮಿಕ ಅರಿವು ಮೂಡಿಸುವ ಕಾರ್ಯವಾಗಲಿ: ಚಂದ್ರಶೇಖರ್

ಮಕ್ಕಳಿಗೆ ಧಾರ್ಮಿಕ ಅರಿವು ಮೂಡಿಸುವ ಕಾರ್ಯವಾಗಲಿ: ಚಂದ್ರಶೇಖರ್

0

ಮೈಸೂರು: ಗುಡಿಯೊಳಗಿನ ದೇವರಲ್ಲಿನ ನಂಬಿಕೆಯಂತೆ ದೇಹದ ಆತ್ಮದೊಳಗಿನ ನಂಬಿಕೆಯು ಪವಿತ್ರವಾದದ್ದು. ಧಾರ್ಮಿಕ ಆಚರಣೆಗಳಲ್ಲಿ ಪರಿಶುದ್ಧತೆ ಆವಶ್ಯ. ಮಕ್ಕಳಿಗೆ ಶಿಕ್ಷಣದ ಆವಶ್ಯಕತೆಯಂತೆ ಧಾರ್ಮಿಕತೆಯ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಚಂಡೆ ಮೇಳ ಕಲಾಸಂಗ ಅಧ್ಯಕ್ಷರಾದ ಚಂದ್ರಶೇಖರ್ ಹೇಳಿದರು.

Join Our Whatsapp Group

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಉಡುಪಿ ಶ್ರೀ ಕೃಷ್ಣ ಮಂದಿರದಲ್ಲಿ ಚಂಡೆ ಮೇಳ ಕಲಾಸಂಗ ವತಿಯಿಂದ ಹತ್ತು ದಿನಗಳ ಕಾಲ ನಿರಂತರವಾಗಿ, 12 ವರ್ಷದ ಒಳಗಿನ ಮಕ್ಕಳಿಗೆ ನಡೆದ ಉಚಿತ ಧಾರ್ಮಿಕ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಗುರುಗಳಿಗೆ ಗುರುಕಾಣಿಕೆ ಹಾಗೂ ಭಗವದ್ಗೀತಾ ಪುಸ್ತಕ ನೀಡಿ ಗುರುವಂದನೆ ಸಲ್ಲಿಸಿ
ಧಾರ್ಮಿಕ ಪ್ರವಚನ ನೀಡಿ ಮಾತನಾಡಿದರು.
ಹಿಂದೂ ಧರ್ಮ ಶ್ರೇಷ್ಠವಾದದ್ದು. ಮಕ್ಕಳಲ್ಲಿ ಧಾರ್ಮಿಕತೆಯ ವಾಸ್ತವದ ವಿಚಾರಗಳ ಅರಿವಿನ ಕೊರತೆಯಿಂದ, ಧರ್ಮಕ್ಕೆ ಹಿನ್ನಡೆಯಾಗುತ್ತಿದೆ. ಹಿಂದೆ ವೃದ್ಧಾಶ್ರಮಗಳಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ಜನತೆಯಲ್ಲಿ ಸಂಸ್ಕಾರ ಹಾಗೂ ಜೀವನ ಮೌಲ್ಯಗಳ ಕೊರತೆಯಿಂದಾಗಿ ಹಿರಿಯರ ಬಗ್ಗೆ ಗೌರವವಿಲ್ಲದೆ. ಇದರ ಪರಿಣಾಮ ಹಿರಿಯರನ್ನು ವೃದ್ಧಾಶಮಕ್ಕೆ ಸೇರಿಸುತ್ತಿರುವುದು ವಿಷಾದನೀಯ. ದೇವಸ್ಥಾನಗಳು ಕೇವಲ ಪೂಜೆ ಹಾಗೂ ಧಾರ್ಮಿಕ ಆಚರಣೆಗಳಿಗೆ ಸಿಮೀತವಾಗದೆ, ಸಾಮಾಜಿಕ ಕ್ಷೇತ್ರಗಳ ಅಭಿವೃದ್ಧಿಯ ಚಟುವಟಿಕೆಗಳೊಂದಿಗೆ ಸಮಾಜದ ಕುಂದು ಕೊರತೆಗಳಿಗೆ ಸ್ವಂದಿಸುವ ಕೇಂದ್ರಗಳಾಗಬೇಕು ಎಂದು ಹೇಳಿದರು.

ವಿಶೇಷವಾಗಿ ಧಾರ್ಮಿಕ ಶಿಕ್ಷಣ ಶಿಬಿರದಲ್ಲಿ 150ಮಕ್ಕಳಿಗೆ ಸಂಧ್ಯಾವಂದನೆ, ದೇವರ ಪೂಜೆ, ಸ್ತೋತ್ರ, ಸುಕ್ತಾದಿಗಳ ಪಾಠಗಳು ವಿಷ್ಣು ಸಹಸ್ರನಾಮ, ಹಾಗೂ ಹೆಣ್ಣು ಮಕ್ಕಳಿಗೆ ಭಜನೆ ಲಕ್ಷ್ಮಿ ಶೋಭಾನ, ಧಾರ್ಮಿಕ ವಿಧಿಗಳ ಆಚರಣೆ ಬಗ್ಗೆ ಶಿಕ್ಷಣ ನೀಡಲಾಯಿತು, ವಿಶೇಷವಾಗಿ ಕರಾವಳಿಯ ಪ್ರಸಿದ್ಧವಾದ ಚೆಂಡಿಯನ್ನು ಕಳಿಸಿಕೊಡಲಾಯಿತು,

ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಡಾ. ಚಕ್ರಪಾಣಿ, ಸುಚಿತ್ರ, ವಿಘ್ನೇಶ್ವರ ಭಟ್, ಚೇತನ್, ನಾಗಶ್ರೀ, ಚಿತ್ರ, ರಾಮಕೃಷ್ಣರಾವ್, ಗುರುರಾಜ್, ಕುಶಾಲ್ ರಾವ್ ,ಕಾರ್ತಿಕ್ ರಾವ್, ಸುದರ್ಶನ್ ರಾವ್, ಪ್ರಜ್ವಲ್ ಹಾಗೂ ಇನ್ನಿತರರು ಭಾಗವಹಿಸಿದ್ದರು