ಮನೆ ರಾಜಕೀಯ ಕನಕಪುರ ಹಾಗೂ ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್, ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ಆಹ್ವಾನ ನೀಡಿದ...

ಕನಕಪುರ ಹಾಗೂ ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್, ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ಆಹ್ವಾನ ನೀಡಿದ ಕಾಂಗ್ರೆಸ್

0

ಬೆಂಗಳೂರು: ಕನಕಪುರ ಹಾಗೂ ವರುಣ ಕ್ಷೇತ್ರದಲ್ಲಿ ಬಿ. ಎಲ್ ಸಂತೋಷ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಸ್ಪರ್ಧೆಗೆ ಆಹ್ವಾನಿಸುತ್ತೇವೆ. ಪಂಥಾಹ್ವಾನ ಸ್ವೀಕರಿಸುವರೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟೀಕಿಸಿದೆ.

Join Our Whatsapp Group

ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾಗಪುರದ ವಂಶದವರು ಇತರರನ್ನು ಹೊಂಡಕ್ಕೆ ತಳ್ಳಿ, ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ ಎಂದಿದೆ.

ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ ಎಂದು ತಿಳಿಸಿದೆ.

ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದಲ್ಲೇ ಗಡಿಪಾರು ಆಗಿದ್ದ, ಅನ್ನಭಾಗ್ಯದ ಅಕ್ಕಿ ಕಳ್ಳಸಾಗಣೆಯ ಆರೋಪಿ, ರೌಡಿ ಶೀಟರ್‌ ಮಣಿಕಂಠ ರಾಠೋಡಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿ ರೌಡಿ ಮೋರ್ಚಾಕ್ಕೂ ಮನ್ನಣೆ ನೀಡಿದೆ. ಬಿಜೆಪಿಯ ಟಿಕೆಟ್‌ಗೆ ‘ಗಡಿಪಾರು’ ಆಗಿರುವುದೇ ಬಹುಮುಖ್ಯ ಮಾನದಂಡ ಎಂಬುದನ್ನು ದೆಹಲಿನಿಂದ ಇಲ್ಲಿಯವರೆಗೆ ನಿರೂಪಿಸಿದೆ ಎಂದು ಕುಟುಕಿದೆ.

ಬಿಜೆಪಿ ಮಂಗಳವಾರ 189 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.