ಮನೆ ಆರೋಗ್ಯ ದಿನಾ ಒಂದು ಪೀಸ್ ಮಾವಿನಹಣ್ಣು ತಿಂದ್ರೂ ಸಾಕು, ಇಷ್ಟೆಲ್ಲಾ ಲಾಭಗಳಿವೆ..

ದಿನಾ ಒಂದು ಪೀಸ್ ಮಾವಿನಹಣ್ಣು ತಿಂದ್ರೂ ಸಾಕು, ಇಷ್ಟೆಲ್ಲಾ ಲಾಭಗಳಿವೆ..

0

ಹಣ್ಣುಗಳ ರಾಜ ಎಂದೇ ಕರೆಯಲ್ಪಡುವ ಮಾವಿನ ಹಣ್ಣು ಮಾರ್ಕೆಟ್ಗೆ ಎಂಟ್ರೀ ಕೊಟ್ಟಾಗಿದೆ! ನಮಗೆಲ್ಲಾ ಗೊತ್ತೇ ಇರುವ ಹಾಗೆ, ಯುಗಾದಿ ಹಬ್ಬ ಕಳೆದ ಬಳಿಕ ಮಾವಿನ ಹಣ್ಣುಗಳ ಮಾರಾಟ ಎಲ್ಲಾ ಕಡೆಗಳಲ್ಲಿಯೂ ಶುರುವಾಗುತ್ತದೆ. ತಳ್ಳುವ ಗಾಡಿಗಳಿಂದ ಹಿಡಿದು, ಸೂಪರ್ ಮಾರ್ಕೆಟ್ ಗಳವರೆಗೂ, ಈ ಹಣ್ಣುಗಳ ಮಾರಾಟ ಬಲು ಜೋರಾಗಿ ನಡೆಯುತ್ತಿದೆ.

Join Our Whatsapp Group

ತನ್ನಲ್ಲಿ ಅಪ್ರತಿಮ ರುಚಿಯನ್ನು ಹೊಂದಿರುವ, ಈ ಹಣ್ಣನ್ನು ಮನೆಯಲ್ಲಿ ಹಿರಿಯರಿಂದ ಹಿಡಿದು, ಸಣ್ಣ ಮಕ್ಕ ಳವರೆಗೂ ಕೂಡ ಇಷ್ಟವಾಗುತ್ತದೆ. ಹಾಗಂತ ಈ ಹಣ್ಣು ಕೇವಲ ರುಚಿ ಮಾತ್ರವಲ್ಲ,ತನ್ನಲ್ಲಿ ಅಗಾಧ ಪ್ರಮಾಣ ದಲ್ಲಿ ಆರೋಗ್ಯಕಾರಿ ಪ್ರಯೋಜನಗಳನ್ನು ಕೂಡ ಒಳಗೊಂಡಿದೆ… ಅವು ಯಾವುದು ಎನ್ನುವುದನ್ನು ಮುಂದೆ ಓದುತ್ತಾ ಸಾಗಿ…

ಮಾವಿನ ಹಣ್ಣಿನಲ್ಲಿ ಸಿಗುವ ಪ್ರಯೋಜನಗಳ ಬಗ್ಗೆ ಹೇಳುವುದಾದರೆ….

• ಇನ್ನು ಈ ಹಣ್ಣಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಹೇಳುವುದಾದರೆ, ವಿಟಮಿನ್ಸ್ ಗಳಾದ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಕೆ ಹಾಗೂ ವಿಟಮಿನ್ ಎ ಅಂಶ ಯಥೇಚ್ಛವಾಗಿ ಕಂಡು ಬರುತ್ತದೆ.

• ಅಷ್ಟೇ ಅಲ್ಲದೆ, ಈ ಹಣ್ಣಿನಲ್ಲಿ ಪೌಷ್ಟಿಕ ಸತ್ವಗಳು ಒಳಗೊಂಡಿರುವ ಹಲವಾರು ಬಗೆಯ ಖನಿಜಾಂಶ ಗಳು ಕೂಡ ಕಂಡು ಬರುತ್ತದೆ.

• ಉದಾಹರಣೆಗೆ ಹೇಳುವುದಾದರೆ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಮೆಗ್ನೀಷಿಯಂ ಹಾಗೂ ಫಾಸ್ಫರಸ್ ಅಂಶಗಳು, ಈ ಹಣ್ಣಿನಲ್ಲಿ ಅಧಿಕ ಪ್ರಮಾಣದಲ್ಲಿ ಸಿಗು ವುದರಿಂದ, ಮಾರು ಕಟ್ಟೆಯಲ್ಲಿ ಸಿಗುವ ಮಾವಿನ ಹಣ್ಣನ್ನು ಮನೆಗೆ ತಂದು ಸೇವನೆ ಮಾಡಬಹುದು.

ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುತ್ತದೆ

• ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗುತ್ತಾ ಹೋದರೆ, ರಕ್ತ ಸಂಚಾರದಲ್ಲಿ ಏರುಪೇರು ಉಂಟಾಗು ವುದರ ಜೊತೆಗೆ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆ ಗಳು ಕಂಡು ಬರುವ, ಸಾಧ್ಯತೆ ಇರುತ್ತದೆ.

• ಹೀಗಾಗಿ ಈ ಸಮಸ್ಯೆಯಿಂದ ದೂರವಿರಬೇಕು ಎಂದರೆ ಆರೋಗ್ಯಕಾರಿ ಆಹಾರ ಪದಾರ್ಥಗಳು, ನೈಸರ್ಗಿಕ ವಾಗಿ ಸಿಗುವ ಹಣ್ಣು-ತರಕಾರಿಗಳನ್ನು ಆಹಾರ ಪದ್ಧತಿಯಲ್ಲಿ ಅನುಸರಿಸಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ.

• ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೇಸಿಗೆ ಕಾಲದಲ್ಲಿ ಸಿಗುವ ಮಾವಿನಹಣ್ಣನ್ನು ಮಿತವಾಗಿ ಸೇವನೆ ಮಾಡುವುದು.

• ಇದಕ್ಕೆ ಪ್ರಮುಖ ಕಾರಣ, ಈ ಹಣ್ಣಿನಲ್ಲಿ ಸಿಗುವ ಉತ್ತಮ ಪ್ರಮಾಣದ ವಿಟಮಿನ್ ಸಿ, ಕರಗುವ ನಾರು ಮತ್ತು ಪೆಕ್ಟಿನ್ ಅಂಶ ರಕ್ತದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗುವಂತೆ ನೋಡಿ ಕೊಳ್ಳುತ್ತದೆ.

ತೂಕ ಇಳಿಸಿಕೊಳ್ಳಲು ಬಯಸುವವರು…

• ಇಂದಿನ ದಿನಗಳಲ್ಲಿ ಹೆಚ್ಚಿನವರಿಗೆ ದೇಹದ ತೂಕ, ಇಳಿಸಿಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ. ಇದಕ್ಕಾಗಿ ಆರೋಗ್ಯಕಾರಿ ಜೀವನ ಶೈಲಿ ಹಾಗೂ ಸರಿಯಾದ ಆಹಾರ ಪದ್ಧತಿಗಳನ್ನು ಅನುಸರಿಸುವು ದರಿಂದ, ದೇಹದ ತೂಕ ಹೆಚ್ಚಾಗದಂತೆ ನೋಡಿ ಕೊಳ್ಳಬಹುದು.

• ಇನ್ನು ದೇಹದ ತೂಕವನ್ನು ಇಳಿಸಿಕೊಳ್ಳಲು ಬಯಸು ವವರು, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಮಾವಿನ ಹಣ್ಣನ್ನು ಕೂಡ ಸೇರಿಸಿಕೊಳ್ಳುವುದರಿಂದ ಒಳ್ಳೆಯ ಫಲಿತಾಂಶವನ್ನು ಕಾಣಬಹುದು.

• ಇದಕ್ಕೆ ಪ್ರಮುಖ ಕಾರಣ, ಈ ಹಣ್ಣಿನಲ್ಲಿ ನೀರಿನಾಂಶ ಅಧಿಕ ಪ್ರಮಾಣದಲ್ಲಿ ಸಿಗುವುದರ ಜೊತೆಗೆ ಕಡಿಮೆ ಪ್ರಮಾಣದ ಕ್ಯಾಲೋರಿ ಅಂಶಗಳು ಕಂಡು ಬರುತ್ತದೆ.

• ಇವೆಲ್ಲದರ ಜೊತೆಗೆ ಈ ಹಣ್ಣಿನಲ್ಲಿ ನಾರಿನಾಂಶದ ಪ್ರಮಾಣ ಕೂಡ ಯಥೇಚ್ಛವಾಗಿ ಸಿಗುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆ ಅಚ್ಚುಕಟ್ಟಾಗಿ ನೆರವೇರುತ್ತದೆ

• ಹಾಗೂ ದೀರ್ಘಕಾಲದವರೆಗೆ ಹೊಟ್ಟೆ ಹಸಿವು ಆಗಂತೆ ನೋಡಿಕೊಳ್ಳುತ್ತದೆ. ಇದರಿಂದಾಗಿ ದೇಹದ ಹೆಚ್ಚುವರಿ ತೂಕವನ್ನು ಇಳಿಸಿಕೊಳ್ಳಲು ಸಹಾಯವಾಗುತ್ತದೆ.

ಲೈಂಗಿಕ ಸಮಸ್ಯೆಗಳಿಗೆ ಒಳ್ಳೆಯದು

• ಇಂದಿನ ದಿನಗಳಲ್ಲಿ ಲೈಂಗಿಕ ಸಮಸ್ಯೆಗಳು ಪುರುಷರು ಹಾಗೂ ಮಹಿಳೆಯರು ಇಬ್ಬರಲ್ಲಿಯೂ ಕೂಡ ಕಂಡು ಬರುತ್ತಿದೆ.

• ಅದರಲ್ಲೂ ಮದುವೆಯಾದ ಬಳಿಕ, ಇದೇ ಸಮಸ್ಯೆಗ ಳಿಂದಾಗಿ, ಹೆಚ್ಚಿನವರ ಸಾಂಸಾರಿಕ ಜೀವನವೇ ಹಾಳಾ ಗುತ್ತಿದೆ. ಈ ಸಮಸ್ಯೆಯ ಬಗ್ಗೆ ತಮ್ಮ ಸ್ನೇಹಿತರ ನಡುವೆ ಚರ್ಚೆ ಮಾಡಲು ಅಥವಾ ವೈದ್ಯರ ಬಳಿಗೆ ಹೋಗಲು ಹಿಂಜರಿಯುವವರೇ ಹೆಚ್ಚು.

• ಈ ಸಮಸ್ಯೆ ಎದುರಿಸುವವರು, ಪ್ರತಿದಿನ ಮಾವಿನ ಹಣ್ಣು ಸೇವನೆ ಮಾಡಿದರೆ ಒಳ್ಳೆಯದು. ಯಾಕೆಂದ್ರೆ ಈ ಹಣ್ಣಿನಲ್ಲಿ ಕಾಮೋತ್ತೇಜಕ ಗುಣಗಳು ಕಂಡು ಬರುವು ದರಿಂದ, ವಿಶೇಷವಾಗಿ ಪುರುಷರಲ್ಲಿ ಪುರುಷತ್ವವನ್ನು ಹೆಚ್ಚಿಸುತ್ತದೆ.

ಪುರುಷರಲ್ಲಿ ಕಾಡುವ ಲೈಂಗಿಕ ಸಮಸ್ಯೆಗಳು ಮತ್ತು ಪರಿಹಾರಗಳು

ಕಣ್ಣುಗಳಿಗೆ ಒಳ್ಳೆಯದು

• ಮೊದಲೇ ಹೇಳಿದ ಹಾಗೆ ಮಾವಿನಹಣ್ಣಿನಲ್ಲಿ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿದೆ, ಇದು ಕಣ್ಣಿನ ದೃಷ್ಟಿಯನ್ನು ಸುಧಾರಿಸಲು ನೆರವಾಗುತ್ತದೆ.

• ಪ್ರಮುಖವಾಗಿ ರಾತ್ರಿ ಕುರುಡುತನ ಹಾಗೂ ಕಣ್ಣು ಗಳನ್ನು ಒಣಗಿಸುವಿಕೆ ಸಮಸ್ಯೆಯನ್ನು ಕೂಡ ತಡೆಯುತ್ತದೆ.