ಬೆಂಗಳೂರು: ಬಂಗಾಳಕೊಲ್ಲಿಯ ಅಸನಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗದಲ್ಲಿ ಮಾರ್ಚ್ 22ರಿಂದ 24ರ ವರೆಗೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಾರ್ಚ್ 23ರಂದು ಭಾರಿ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಹಾಗೂ ಮೈಸೂರು, ಮಂಡ್ಯ ಮತ್ತು ರಾಮನಗರದಲ್ಲಿ ಮಾರ್ಚ್ 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹೇಳಿದೆ.