ಮನೆ ರಾಜ್ಯ ನಾಳೆಯಿಂದ 2 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ

ನಾಳೆಯಿಂದ 2 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ

0

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು, ನಾಳೆಯಿಂದ (ಏ.16) 2 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

Join Our Whatsapp Group

ನಾಳೆ ಬೆಳಗ್ಗೆ 9.30ಕ್ಕೆ ದೆಹಲಿ ಏರ್ಪೋರ್ಟ್ ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರನತ್ತ ಪ್ರಯಾಣ ಬೆಳಸುವ ರಾಹುಲ್ ಗಾಂಧಿ 11.50ಕ್ಕೆ ಬೆಂಗಳೂರು ಏರ್ಪೋರ್ಟ್ ಗೆ ತಲುಪುತ್ತಾರೆ.

ನಂತರ ಮಧ್ಯಾಹ್ನ 12.25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ ಜೈ ಭಾರತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 2.40ಕ್ಕೆ ಕೋಲಾರದಿಂದ ಬೆಂಗಳೂರಿಗೆ ಹೊರಡಲಿದ್ದಾರೆ. ಸಂಜೆ 5 ಗಂಟೆವರೆಗೆ ಶಾಂಗ್ರಿಲಾ ಹೋಟೆಲ್ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ 5.30ಕ್ಕೆ ಜೆ.ಪಿ.ನಗರದಲ್ಲಿನ ಬೀದಿಬದಿ ವ್ಯಾಪಾರಿಗಳು, ಪೌರಕಾರ್ಮಿಕರ ಜತೆ ಸಂವಾದ ನಡೆಸಲಿದ್ದಾರೆ. ಸಂಜೆ 6.45ಕ್ಕೆ ಇಂದಿರಾ ಗಾಂಧಿ ಭವನ ಉದ್ಘಾಟಿಸಲಿದ್ದಾರೆ.

ಏ.17ರಂದು ರಾಹುಲ್ ಗಾಂಧಿ ಬೀದರ್ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಭಾಲ್ಕಿ, ಹುಮ್ನಾಬಾದ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.