ಮನೆ ಸುದ್ದಿ ಜಾಲ ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸಲು ಮೋದಿ ಕರೆ

ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸಲು ಮೋದಿ ಕರೆ

0

ನವದೆಹಲಿ: ವಿಶ್ವ ಜಲ ದಿನದ ಸಂದರ್ಭದಲ್ಲಿ ಪ್ರತಿ ಹನಿ ನೀರನ್ನು ಉಳಿಸುವ ಪ್ರತಿಜ್ಞೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಜಲ ಸಂರಕ್ಷಣೆಗಾಗಿ ವಿವಿಧ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮೋದಿ, ವಿಶ್ವ ಜಲ ದಿನದಂದು ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ರಾಷ್ಟ್ರದ ಎಲ್ಲಾ ಭಾಗಗಳಲ್ಲಿ ವಿನೂತನ ಪ್ರಯತ್ನಗಳು ನಡೆಯುವುದರೊಂದಿಗೆ ನೀರಿನ ಸಂರಕ್ಷಣೆ ಒಂದು ಸಾಮೂಹಿಕ ಆಂದೋಲನವಾಗಿ ಮಾರ್ಪಟ್ಟಿರುವುದು ಸಂತೋಷಕರವಾಗಿದೆ ಎಂದು ಹೇಳಿದ ಅವರು, ನೀರು ಉಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಎಲ್ಲ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಶ್ಲಾಘಿಸಿದ್ದಾರೆ.