ಮನೆ ಸುದ್ದಿ ಜಾಲ ಮೈಸೂರು ಜಿಲ್ಲೆಯಲ್ಲಿ ಇಂದು 20 ನಾಮಪತ್ರಗಳ ಸಲ್ಲಿಕೆ

ಮೈಸೂರು ಜಿಲ್ಲೆಯಲ್ಲಿ ಇಂದು 20 ನಾಮಪತ್ರಗಳ ಸಲ್ಲಿಕೆ

0

ಮೈಸೂರು: ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 15 ರಂದು 20 ನಾಮಪತ್ರಗಳು ಸಲ್ಲಿಕೆಯಾಗಿವೆ.

Join Our Whatsapp Group

210- ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಜನತಾದಳ (ಸೆಕ್ಯೂಲರ್) ಅಭ್ಯರ್ಥಿಯಾಗಿ ಕೆ.ಮಹದೇವ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ಗುರುಮೂರ್ತಿ ಜೋಗನಹಳ್ಳಿ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ನವೀನ್ ಕುಮಾರ್ ಪಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡಿಯೂರಪ್ಪ ಮತ್ತು ಸುಬ್ರಹ್ಮಣ್ಯ ಬಿ.ಎಸ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

211- ಕೆ.ಆರ್ ನಗರ ವಿಧಾನ ಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಮೋಹನ್ ಕೆ. ನಾಮ ಪತ್ರ ಸಲ್ಲಿಸಿದ್ದಾರೆ.

212- ಹುಣಸೂರು ವಿಧಾನ ಸಭಾ ಕ್ಷೇತ್ರದಿಂದ ಜನತಾದಳ (ಸೆಕ್ಯೂಲರ್ ) ಪಕ್ಷದ ಅಭ್ಯರ್ಥಿ ಜಿ.ಡಿ.ಹರೀಶ್ ಅವರು 2 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್, ಪಕ್ಷೇತರ ಅಭ್ಯರ್ಥಿ ಉಮೇಶ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

214- ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಹೆಚ್. ಹನುಮಯ್ಯ, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ಎಂ.ಪಿ.ವಿಜಯ್ ಕುಮಾರ್ ನಾಮ ಪತ್ರ ಸಲ್ಲಿಸಿದ್ದಾರೆ.

217- ಚಾಮರಾಜ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿ ಮಾಳವಿಕ ಗುಬ್ಬಿ ವಾಣಿ ಅವರು 3 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಪ್ರಭ. ವಿ ಹಾಗೂ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಅಭ್ಯರ್ಥಿ ಸೀಮಾ ಜಿ.ಎಸ್. ಅವರು ನಾಮಪತ್ರ ಸಲ್ಲಿಸಿದ್ದಾರೆ.

218- ನರಸಿಂಹರಾಜ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಪ್ರಜಾಕೀಯ ಪಾರ್ಟಿ ಅಭ್ಯರ್ಥಿ ಲೀಲಾವತಿ ಜಿ.ಎಸ್, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಅಭ್ಯರ್ಥಿ ಅಮಜದ್ ಖಾನ್, ಪಕ್ಷೇತರ ಅಭ್ಯರ್ಥಿಯಾಗಿ ಅಜೀಜುಲ್ಲಾ ಅಜ್ಜು ಅವರು ನಾಮ ಪತ್ರ ಸಲ್ಲಿಸಿದ್ದಾರೆ.

213- ಹೆಚ್.ಡಿ.ಕೋಟೆ, 215-ಚಾಮುಂಡೇಶ್ವರಿ, 216-ಕೃಷ್ಣರಾಜ, 219-ವರುಣಾ ಹಾಗೂ 220-ಟಿ.ನರಸೀಪುರ ಕ್ಷೇತ್ರಗಳಿಗೆ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.