ಮನೆ ರಾಜ್ಯ ರಾಮನಗರ: ಏಕಕಾಲದಲ್ಲಿ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ರಾಮನಗರ: ಏಕಕಾಲದಲ್ಲಿ ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

0

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಸೋಮವಾರ ಏಕಕಾಲಕ್ಕೆ ನಾಮಪತ್ರ ಸಲ್ಲಿಸಿದರು.

Join Our Whatsapp Group

ಈ ಸಂದರ್ಭ ತಾಲ್ಲೂಕು ಆಡಳಿತ ಸೌಧದ ಮುಂಭಾಗ ಎರಡೂ ಪಕ್ಷಗಳ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ನೆರೆದಿದ್ದು, ಪರಸ್ಪರ ಘೋಷಣೆ ಕೂಗಿದರು.

ಇಕ್ಬಾಲ್ ಹುಸೇನ್ ಅವರಿಗೆ ಸ್ಥಳೀಯ ಮುಖಂಡರಾದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ, ಸಯ್ಯದ್ ಜಿಯಾವುಲ್ಲಾ, ಪಿ. ನಾಗರಾಜು ಸಾಥ್ ನೀಡಿದರು.

ರಾಮನಗರದಲ್ಲಿ ಕುಮಾರಸ್ವಾಮಿ ಮೆರವಣಿಗೆಯಲ್ಲಿ ಪಾಲ್ಗೊಂಡರೆ, ನಿಖಿಲ್ ಅವರು ತಾಯಿ ಅನಿತಾ ಕುಮಾರಸ್ವಾಮಿ ಹಾಗೂ ಸ್ಥಳೀಯ ಮುಖಂಡರ ಜೊತೆಗೂಡಿ ನಾಮಪತ್ರ ಸಲ್ಲಿಸಿದರು.