ಮನೆ ದೇವರ ನಾಮ ಶರಣೆಂಬೆ ವಾಣಿ

ಶರಣೆಂಬೆ ವಾಣಿ

0

ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ

ವಾಗಭಿಮಾನಿ ವರ ಬ್ರಹ್ಮಾಣಿ
ಸುಂದರವೇಣಿ ಸುಚರಿತ್ರಾಣಿ

ಜಗದೊಳು ನಿಮ್ಮ ಪೊಗಳುವೆನಮ್ಮ
ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ

ಪಾಡುವೆ ಶ್ರುತಿಯ ಬೇಡುವೆ ಮತಿಯ
ಪುರಂದರವಿಠಲನ ಸೋದರಸೊಸೆಯ