ಮನೆ ಉದ್ಯೋಗ 5 ಇಲಾಖೆಗಳ ಸರ್ಕಾರಿ ಹುದ್ದೆಗಳಿಗೆ ಇಂದು ಕೆಇಎ ಅಧಿಸೂಚನೆ

5 ಇಲಾಖೆಗಳ ಸರ್ಕಾರಿ ಹುದ್ದೆಗಳಿಗೆ ಇಂದು ಕೆಇಎ ಅಧಿಸೂಚನೆ

0

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರದ ನಿರ್ದೇಶನದಂತೆ ಈ ಕೆಳಗಿನ ವಿವಿಧ ಐದು ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಇಂದು ಅಧಿಸೂಚನೆ ಬಿಡುಗಡೆ ಮಾಡಲಿದೆ. ಈ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಇಂದಿನಿಂದ ಸ್ವೀಕಾರ ಮಾಡುವ ಸಾಧ್ಯತೆ ಇದೆ. ಹುದ್ದೆಗಳ ಹೆಸರು, ಉದ್ಯೋಗ ಇಲಾಖೆ / ಸಂಸ್ಥೆಗಳ ವಿವರ ಕೆಳಗಿನಂತಿದೆ.

Join Our Whatsapp Group


ಯಾವೆಲ್ಲ ಇಲಾಖೆ ಸರ್ಕಾರಿ ಹುದ್ದೆಗಳಿಗೆ ಅಧಿಸೂಚನೆ ?

  • ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಬೆಂಗಳೂರು.
  • ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು.
  • ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು.
  • ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು.
  • ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್, ಬೆಂಗಳೂರು.
    ಈ ಮೇಲಿನ ಎಲ್ಲಾ ಇಲಾಖೆಗಳಿಗೆ ನೇಮಕ ಅಧಿಸೂಚನೆ ಬಿಡುಗಡೆ ಆಗಲಿದೆ. ನಂತರದಲ್ಲಿ ಯಾವ ಇಲಾಖೆಯಲ್ಲಿ ಯಾವ ಹುದ್ದೆಗಳು ಇವೆ ಎಂದು ಅಭ್ಯರ್ಥಿಗಳು ತಿಳಿಯಬಹುದು. ಅಧಿಸೂಚನೆಯಲ್ಲಿ ಹುದ್ದೆಗಳ ಹೆಸರು, ಒಟ್ಟು ಹುದ್ದೆಗಳ ಸಂಖ್ಯೆ, ಹುದ್ದೆವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳು ಹಾಗೂ ಅರ್ಹತೆಗಳ ಬಗ್ಗೆ ಮಾಹಿತಿಗಳನ್ನು ತಿಳಿಯಬಹುದು.
    ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳು ಸೇರಿದಂತೆ ಹುದ್ದೆಗಳಿರಲಿವೆ.
    ಅಧಿಸೂಚನೆ ಒಮ್ಮೆ ಬಿಡುಗಡೆ ನಂತರ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಸೂಕ್ತವಾದ ಯುಆರ್ಎಲ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. .
    ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ.
    ಸೂಚನೆಗಳು
  • ಕೇವಲ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು.
  • ಬೆಂಗಳೂರು ಕೇಂದ್ರದಲ್ಲಿ ಮಾತ್ರ ಎಲ್ಲ ಹುದ್ದೆಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
  • ಸ್ಪರ್ಧಾತ್ಮಕ ಪರೀಕ್ಷೆಯನ್ನು 2023 ರ ಜೂನ್, ಜುಲೈನಲ್ಲಿ ನಡೆಸಲಾಗುವುದು.