ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಈ ಸಂಬಂಧ ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ ಹೊರಡಿಸಿದ್ದಂತ ಆದೇಶ ರದ್ದುಪಡಿಸುವಂತೆ ಕೋರಿ, ಕೊಪ್ಪಳದ ನಿವಾಸಿಯೊಬ್ಬರು ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ಚೆಕ್ ಬೌನ್ಸ್ ಪ್ರಕರಣದಲ್ಲಿ ದೂರುದಾರರಿಗೆ ಮಧ್ಯಂತರ ಪರಿಹಾರ ಪಾವತಿಸುವಂತೆ ಆರೋಪಿಗೆ ಆದೇಶಿಸುವ ವಿವೇಚನಾಧಿಕಾರವನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊಂದಿದೆ.
ಆದರೆ, ಮಧ್ಯಂತರ ಪರಿಹಾರ ಪಾವತಿಗೆ ಆದೇಶಿಸುವುದು ಕಡ್ಡಾಯವೇನೂ ಅಲ್ಲ ಎಂಬುದಾಗಿ ತಿಳಿಸಿದೆ.
ಅಂದಹಾಗೇ ಕೊಪ್ಪಳದ ಕುಷ್ಟಗಿ ನಿವಾಸಿ ವಿಜಯಾ ಎಂಬುವರು, ಯಲಬುರ್ಗಾ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಲಯವು, ಚೆಕ್ ಬೌನ್ ಪ್ರಕರಣದಲ್ಲಿ ಸಾಲ ಪಡೆದ ಮೊತ್ತದ ಪೈಕಿ ಶೇ.20ರಷ್ಟು ಹಣವನ್ನು ಮಧ್ಯಂತರ ಪರಿಹಾರವಾಗಿ ಪಾವತಿಸುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.