ಹುಬ್ಬಳ್ಳಿ: ತಮಗೆ ಟಿಕೆಟ್ ಕೈತಪ್ಪಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಕಾರಣ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದಿಶ್ ಶೆಟ್ಟರ್ ಬಹಿರಂಗವಾಗಿಯೇ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊನ್ನೇ ಅಷ್ಟೇ ತುರ್ತು ಸುದ್ದಿಗೋಷ್ಠಿ ನಡೆಸಿದ್ದು, ನನ್ನ ವಿರುದ್ದ ಬಿಎಲ್ ಸಂತೋಷ್ ಅವರು ಹೈಕಮಾಂಡ್ ಬಳಿ ಅಪಪ್ರಚಾರ ಮಾಡಿದರು. ಅವರ ಟೀಂ ಕೂಡ ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿತ್ತು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಟಿಕೆಟ್ ಘೋಷಣೆ ಆಗುವವರೆಗೆ ಸುಮ್ಮನಿದ್ದೆ ಎಂದು ಹೊಸ ಬಾಂಬ್ ಸಿಡಿಸಿದರು.
ಕೋರ್ ಕಮಿಟಿ ಸಭೆಯಲ್ಲಿ ನನ್ನ ಹೆಸರು ಜೊತೆ ಒಟ್ಟು ಮೂವರ ಆಕಾಂಕ್ಷಿಗಳ ಹೆಸರುಗಳನ್ನು ಕಳುಹಿಸಲಾಗಿತ್ತು. ಸ್ಕ್ರೀನಿಂಗ್ ಕಮಿಟಿಯಲ್ಲಿ ನನ್ನ ಹೆಸರಿತ್ತು. ಆದ್ರೆ, ಕೊನೆಗೆ ಟಿಕೆಟ್ ಕೈತಪ್ಪುವುದಕ್ಕೆ ಸಂತೋಷ್ ಕಾರಣ. ರಾಮದಾಸ್ ಕ್ಷೇತ್ರಕ್ಕೂ ನಾನು ಹೋಗಿದ್ದೆ. ರಾಮದಾಸ್ ನಿಂತರೆ ಗೆಲ್ಲುತ್ತಾರೆ. ರಾಮದಾಸ್ ಸಂತೋಷ್ ಆಪ್ತ ಅಲ್ಲ. ಶ್ರೀವತ್ಸ ಸಂತೋಷ್ ಅವರ ಆಪ್ತ. ಹಾಗಾಗಿ ರಾಮದಾಸ್ ಗೆ ಟಿಕೆಟ್ ಕೈತಪ್ಪಿದ್ದು, ಶ್ರೀವತ್ಸಗೆ ಟಿಕೆಟ್ ಸಿಕ್ಕಿದೆ. ರಾಮದಾಸ್ ಬಂಡಾಯ ಎದ್ದರೆ ಗೆಲ್ಲುವುದಕ್ಕೆ ಆಗಲ್ಲ. ಬಿಎಲ್ ಸಂತೋಷ್ ಕೇರಳದಲ್ಲಿ ಇನ್ ಚಾರ್ಜ್ ಮಾಡಿದ್ರು ಒಂದು ಸೀಟ್ ಬರಲಿಲ್ಲ. ತಮಿಳುನಾಡಿಲ್ಲಿ ಎರಡು ಮೂರು ಸೀಟ್ ಬಂತು. ಇವತ್ತು ಕರ್ನಾಟಕದಲ್ಲಿ ಕಾರಬಾರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೋರ್ ಕಮಿಟಿಯಲ್ಲಿ ನಳಿನ್ ಕುಮಾರ್ ಕಟೀಲು ಹೆಸರು ಸೇರಿಸಿದ್ದೇ ಸಂತೋಷ್. ಕಟೀಲ್ ಅವರ ರಾಜಾಧ್ಯಕ್ಷ ಅವಧಿ ಮುಗಿದಿದ್ದರೂ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕ ಆಗಿಲ್ಲ. ಬಿ.ಎಲ್.ಸಂತೋಷ್ ಹೇಳಿದಂತೆ ನಳಿನ್ ಕುಮಾರ್ ಕೇಳುತ್ತಾರೆ. ಕಟೀಲು ಕೆಲ ದಿನಗಳ ಹಿಂದೆ ಮಾತಾಡಿದ್ದ ಆಡಿಯೋ ವೈರಲ್ ಆಗಿತ್ತು. ಯಡಿಯೂರಪ್ಪನವರ ಕಾಲ ಮುಗಿತು, ಈಶ್ವರಪ್ಪ, ಶೆಟ್ಟರ್ ಮುಗಿಸುತ್ತೇವೆ ಎಂದಿದ್ದರು ಎಂದು ಜಗದೀಶ್ ಶೆಟ್ಟರ್ ಸ್ಫೋಟ ಅಂಶಗಳನ್ನು ಬಹಿರಂಗಪಡಿಸಿದರು.
ಅವರು ಯಾಕೆ ಗ್ರೌಂಡ್ ರಿಪೋರ್ಟ್ ಕೊಡಲಿಲ್ಲ. ಅರುಣ್ ಸಿಂಗ್ ಧರ್ಮೆಂದ್ರ ಪ್ರದಾನ ನಮ್ಮ ಕರೆದು ಮಾತಾಡಿಲ್ಲ. ಕೆಲವರ ಕಪಿ ಮುಷ್ಟಿಯಲ್ಲಿ ಬಿಜೆಪಿ ಇದೆ. ಹೀಗಾಗಿ ಅನಾಹುತ ಆಗುತ್ತಿದೆ. ಒಂದು ಚುನಾವಣೆ ಗೆಲ್ಲಲು ಆಗದವರನ್ನು ರಾಜ್ಯ ಚುನಾವಣೆ ಸಹ ಉಸ್ತುವಾರಿ. ಅವರಿಗೆ ಒಂದು ಕ್ಷೇತ್ರದ ಮಾಹಿತಿ ಇಲ್ಲ. ಕೋರ್ ಕಮಿಟಿಯಲ್ಲಿ ನಾವು ಅವರ ಹಿಂದೆ ಕೂಡಬೇಕು. ನಮ್ಮ ಕೆಳಗೆ ಕೆಲಸ ಮಾಡಿದ ಆಪೀಸರ್ ಹಿಂದೆ ಕೂಡಬೇಕು. ನಾನು ಸದಾನಂದಗೌಡ ಹಿಂದೆ ಕೂತಿದ್ದೆವು ಎಂದು ಅಣ್ಣಾಮಲೈ ಅವರನ್ನು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯ್ನನಾಗಿ ಮಾಡಿದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ನನಗೆ ಟಿಕೆಟ್ ಕೈತಪ್ಪಲು ಮೂಲಭೂತವಾಗಿ ಬಿ ಎಲ್ ಸಂತೋಷ್ ಅವರೇ ಕಾರಣ. ಚಿಕ್ಕ ಮಕ್ಕಳಿಗೆ ಹೇಳುವ ರೀತಿಯಲ್ಲಿ ಫೋನ್ ಮಾಡಿ ನಿಮಗೆ ಟಿಕೆಟ್ ಇಲ್ಲ ಎಂದು ಕೊನೆಗೆ ಹೇಳಿಬಿಟ್ಟರು. ನಾನು ಬಂಡಾಯವೆದ್ದಾಗ ಆ ಮೇಲೆ ಆ ಹುದ್ದೆ ನೀಡುತ್ತೇವೆ, ಈ ಹುದ್ದೆ ನೀಡುತ್ತೇವೆ. ನಿಮಗೆ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭವಿಷ್ಯವಿದೆ ಉತ್ತಮ ಸ್ಥಾನಮಾನ ನೀಡಲಾಗುವುದು ಎಂದೆಲ್ಲ ಹೇಳಿದರು. ಅದನ್ನೇ ಆರಂಭದಲ್ಲಿಯೇ ಹೇಳಿ ಗೌರವಯುತವಾಗಿ ನನ್ನನ್ನು ಚುನಾವಣಾ ರಾಜಕೀಯದಿಂದ ಕಳುಹಿಸಿಕೊಡಬಹುದಾಗಿತ್ತಲ್ಲವೇ ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.