ಮನೆ ಅಂತಾರಾಷ್ಟ್ರೀಯ ಸುಡಾನ್ ನಲ್ಲಿ ಸಿಲುಕಿರುವ ರಾಜ್ಯದ 31 ಜನರನ್ನು ಸುರಕ್ಷಿತವಾಗಿ ಕರೆತನ್ನಿ: ಸಿದ್ದರಾಮಯ್ಯ

ಸುಡಾನ್ ನಲ್ಲಿ ಸಿಲುಕಿರುವ ರಾಜ್ಯದ 31 ಜನರನ್ನು ಸುರಕ್ಷಿತವಾಗಿ ಕರೆತನ್ನಿ: ಸಿದ್ದರಾಮಯ್ಯ

0

ಬೆಂಗಳೂರು: ಕಳೆದೊಂದು ವಾರದಿಂದ ಸುಡಾನ್‌ ನಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ ಘರ್ಷಣೆಯಿಂದ ಅಶಾಂತಿ, ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ಕೇಂದ್ರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Join Our Whatsapp Group

ಮಂಗಳವಾರ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು. ಅವರನ್ನು ಸುರಕ್ಷಿತವಾಗಿ ದೇಶಕ್ಕೆ ಕರೆತರಬೇಕು ಎಂದು ಮನವಿ ಮಾಡಿದ್ದಾರೆ.

ಸುಮಾರು 60 ಭಾರತೀಯರು ಅಲ್ಲಿ ಸಂಕಷ್ಟದಲ್ಲಿದ್ದಾರೆ ಎಂಬ ವರದಿಗಳು ಬಂದಿವೆ. ಕೇಂದ್ರ ಸರ್ಕಾರ ಕೂಡಲೇ ನೆರವಿಗೆ ದಾವಿಸಬೇಕು ಎಂದು ಆಗ್ರಹಿಸಿದ್ದಾರೆ.

ಸುಡಾನ್‌ನ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ತೀವ್ರ ಘರ್ಷಣೆ ಮುಂದುವರಿದಿದ್ದು ಕನಿಷ್ಠ 200 ಮಂದಿ ಸತ್ತು, 1800ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಈ ಬೆಳವಣಿಗೆಯಿಂದ ಅಲ್ಲಿ ಅಶಾಂತಿ, ಉದ್ವಿಗ್ನ ಸ್ಥಿತಿ ಮೂಡಿದೆ.