ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್ ದಿನಾಂಕ 17-03-2022 ರಲ್ಲಿ ಅಧಿಸೂಚಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕ ಸಂಬಂಧ, ಇದೀಗ ಮೂಲ ದಾಖಲೆಗಳ ಪರಿಶೀಲನೆಯ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 26, 27 ರಂದು ಕೆಪಿಎಸ್ಸಿ ಡಾಕ್ಯುಮೆಂಟ್ ವೆರಿಫಿಕೇಶನ್ ಅನ್ನು ಉದ್ಯೋಗ ಸೌಧದಲ್ಲಿ ನಡೆಸಲಿದೆ. ಆಯೋಗ ಬಿಡುಗಡೆ ಮಾಡಿರುವ ಡಿವಿ ಲಿಸ್ಟ್ನಲ್ಲಿ ಅಭ್ಯರ್ಥಿಗಳ ಹೆಸರು, ಅವರು ಯಾವ ದಿನಾಂಕದಂದು / ಸಮಯದಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆ ವೇಳಾಪಟ್ಟಿ, ಅರ್ಹತಾ ಪಟ್ಟಿಯನ್ನು ಚೆಕ್ ಮಾಡಲು ಕೆಪಿಎಸ್ಸಿ ವೆಬ್ಸೈಟ್ ಗೆ ಭೇಟಿ ನೀಡಿ. ಅಥವಾ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿರಿ.
RDWS JE ಹುದ್ದೆ ದಾಖಲೆಗಳ ಪರಿಶೀಲನೆಗೆ ಅಭ್ಯರ್ಥಿಗಳು ಹಾಜರುಪಡಿಸಬೇಕಾದ ಮೂಲ ದಾಖಲೆಗಳ ಚೆಕ್ ಲಿಸ್ಟ್
ವಯೋಮಿತಿ ಅರ್ಹತೆ ಪ್ರಮಾಣ ಪತ್ರ (ಎಸ್ಎಸ್ಎಲ್ಸಿ ಅಂಕಪಟ್ಟಿ ಸಹ ಆಗುತ್ತದೆ)
ಶೈಕ್ಷಣಿಕ ಅರ್ಹತೆ ಪ್ರಮಾಣ ಪತ್ರ
ಜಾತಿ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
ಗ್ರಾಮೀಣ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
ಕನ್ನಡ ಮಾಧ್ಯಮ ಮೀಸಲಾತಿಗೆ ಸಂಬಂಧಿಸಿದ ಪ್ರಮಾಣ ಪತ್ರಗಳು
ಮಾಜಿ ಸೈನಿಕರ ಮೀಸಲಾತಿ ಪ್ರಮಾಣ ಪತ್ರಗಳು
ಯೋಜನೆಗಳಿಂದ ನಿರಾಶ್ರಿತ ಅಭ್ಯರ್ಥಿಗಳ ಮೀಸಲಾತಿ ಪ್ರಮಾಣ ಪತ್ರ
ಅಂಗವಿಕಲ ಅಭ್ಯರ್ಥಿ ಮೀಸಲಾತಿ ಪ್ರಮಾಣ ಪತ್ರ
ಸೇವಾ ನಿರತ ಅಭ್ಯರ್ಥಿಗಳ ಪ್ರಮಾಣ ಪತ್ರ
ಸಂಬಂಧಪಟ್ಟ ತಾಲ್ಲೂಕು ತಾಹಶೀಲ್ದಾರ್ ರವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ
2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
ಪ್ರಮಾಣ ಪತ್ರಗಳ ಪೈಕಿ ಮೀಸಲಾತಿಗೆ ಯಾವುದೋ ಅನ್ವಯವಾಗುತ್ತದೋ ಆ ಎಲ್ಲ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.
ಅಭ್ಯರ್ಥಿಗಳು ಮೇಲ್ಕಂಡ ಎಲ್ಲಾ ಮೂಲ ದಾಖಲೆಗಳ 2 ಸೆಟ್ ಜೆರಾಕ್ಸ್ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಸಲ್ಲಿಸತಕ್ಕದ್ದು.