ಮನೆ ಅಪರಾಧ ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು, ಹಲವರಿಗೆ ಗಂಭೀರ ಗಾಯ

ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು, ಹಲವರಿಗೆ ಗಂಭೀರ ಗಾಯ

0

ಸುಬ್ರಹ್ಮಣ್ಯ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡಿದ್ದಾರೆ.

Join Our Whatsapp Group

ಮಂಗಳವಾರ ಮಧ್ಯಾಹ್ನ  ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಕಾರು ಕುಕ್ಕೆ ಕಡೆ ಹಾಗೂ ತೂಫನ್ ಧರ್ಮಸ್ಥಳ ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು  ಮೃತಪಟ್ಟಿದ್ದಾರೆ.

ಮೃತರು ಬೇಳೂರು ಕಡೆಯವರು ಎಂದು ತಿಳಿದು ಬಂದಿದೆ. ತೂಫನ್ ನಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿವೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ.