ಮನೆ ರಾಜ್ಯ ಬೆಳಗಾವಿ: 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್’ಗಳ ವಶ

ಬೆಳಗಾವಿ: 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್’ಗಳ ವಶ

0

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಗೆ ಹಿನ್ನೆಲೆ ಚುನಾವಣಾಧಿಕಾರಿಗಳು ಕಟ್ಟುನಿಟ್ಟಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ 42.92 ಲಕ್ಷ ಮೌಲ್ಯದ ಹೊಲಿಗೆ ಯಂತ್ರ, ಟಿಫಿನ್ ಬಾಕ್ಸ್​​’ಗಳನ್ನು ಜಪ್ತಿ ಮಾಡಿದ್ದಾರೆ.

Join Our Whatsapp Group

ಸವದತ್ತಿಯ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ದಾಳಿ ನಡೆಸಿದ ಚುನಾವಣಾಧಿಕಾರಿಗಳು 23,84,272 ರೂ. ಮೌಲ್ಯದ 1,012 ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

11,27,840 ರೂ. ಮೌಲ್ಯದ 1,060 ಐರನ್​ ಸ್ಟ್ಯಾಂಡ್​ಗಳು. ಜೆಡಿಎಸ್ ಅಭ್ಯರ್ಥಿ ಸೌರವ್ ಚೋಪ್ರಾ ಭಾವಚಿತ್ರವಿರುವ 3.24 ಲಕ್ಷ ಮೌಲ್ಯದ 2,160 ಟಿಫಿನ್ ಬಾಕ್ಸ್‌ಗಳನ್ನು ಜಪ್ತಿ ಮಾಡಲಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.