ಮನೆ ಅಪರಾಧ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಓರ್ವನ ಬಂಧನ

0

ಹಲಗೂರು: ಪಟ್ಟಣದ ಹೊರವಲಯದಲ್ಲಿ ಬೈಪಾಸ್‌ ರಸ್ತೆ ಸಮೀಪ ರೇಷ್ಮೆ ಸಾಕಾಣಿಕೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಮೇಲೆ ಉಮೇಶ್‌(32) ಎಂಬ ಆಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದ ಎಂಬ ಖಚಿತ ಮಾಹಿತಿ ಮಾಹಿತಿ ಮೇರೆಗೆ ಹಲಗೊರು ಠಾಣೆ ಪೊಲೀಸ್‌ ನಿರೀಕ್ಷಕ ಶ್ರೀಧರ್‌ ನೇತೃತ್ವದಲ್ಲಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.  ಹಾಗೂ ಓರ್ವ ಮಹಿಳೆಯನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.