ಮನೆ ಸುದ್ದಿ ಜಾಲ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ

0

ಬೆಂಗಳೂರು: ಉದ್ಯಮಿ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ‌ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನೆ ಮೇಲೆ ಬುಧವಾರ ಬೆಳಿಗ್ಗೆ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Join Our Whatsapp Group

ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ನಿವಾಸ ರುಕ್ಸಾನಾ ಪ್ಯಾಲೇಸ್ ​​ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಬಾಬು, ಟಿಕೆಟ್‌ ಕೈತಪ್ಪುವುದು ಖಚಿತವಾದ ಬಳಿಕ ಪತ್ನಿ ಶಾಝಿಯಾ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದರು.

ಈ ಹಿಂದೆ ಸ್ಥಳೀಯ ಸಂಸ್ಥೆಗಳ ಬೆಂಗಳೂರು ನಗರ ಜಿಲ್ಲಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಬು, 8,000 ಕೋಟಿಗೂ ಹೆಚ್ಚು ಮೊತ್ತದ ಆಸ್ತಿ ಘೋಷಿಸಿಕೊಂಡಿದ್ದರು‌.

ಬಾಬು ಅವರ ಮನೆ, ಕಚೇರಿಗಳ ಮೇಲೆ ಹಿಂದೆಯೂ ಐ.ಟಿ ದಾಳಿಗಳು ನಡೆದಿದ್ದವು. ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುತ್ತಿದೆ.

ರೇಷ್ಮೆ ಸೀರೆ, ಡಿಮಾಂಡ್ ಡ್ರಾಫ್ಟ್ ವಶ

ಉದ್ಯಮಿ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಮನೆಯಲ್ಲಿ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿ.ಡಿ) ಹಾಗೂ 5,000 ರೇಷ್ಮೆ‌ ಸೀರೆಗಳನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಉಮ್ರಾ ಫೌಂಡೇಷನ್ ಹೆಸರಿನಲ್ಲಿ ತಲಾ ₹1,105 ಮೌಲ್ಯದ ಡಿ.ಡಿಗಳನ್ನು ಮನೆಯಲ್ಲಿ ಇರಿಸಲಾಗಿತ್ತು. ತಲಾ ₹5,000 ಮೌಲ್ಯದ 5,000 ಕಂಚಿ ರೇಷ್ಮೆ ಸೀರೆಗಳೂ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.ಡಿ.ಡಿ, ಸೀರೆ ಮತ್ತು ಕೆಜಿಎಫ್ ಬಾಬು ಅವರ ಭಾವಚಿತ್ರವುಳ್ಳ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಒಂದೇ ಕಡೆ ಇರಿಸಲಾಗಿತ್ತು. ಡಿ.ಡಿಗಳಲ್ಲಿ ಚಿಕ್ಕಪೇಟೆ ನಿವಾಸಿಗಳ ಹೆಸರಿದೆ ಎಂಬ ಮಾಹಿತಿ ಲಭ್ಯವಾಗಿದೆ.