ಮನೆ ಶಿಕ್ಷಣ ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

0

ಬೆಂಗಳೂರು:  ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

Join Our Whatsapp Group

ನಾಳೆ ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ.

9-03-2023 ರಿಂದ 29-03-2023ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗಿತ್ತು.  ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು ಫಲಿತಾಂಶ ಪ್ರಕಟವಾಗಲಿದೆ.  ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದಾಗಿದೆ.