ಮನೆ ಶಿಕ್ಷಣ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡಕ್ಕೆ ಪ್ರಥಮ ಸ್ಥಾನ

0

ಬೆಂಗಳೂರು:  ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ 95.33ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

Join Our Whatsapp Group

ಇಂದು(ಏಪ್ರಿಲ್ 21) ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್ ಆಗಿದ್ದಾರೆ.

ಯಾವ ಜಿಲ್ಲೆ ಫಸ್ಟ್? ಯಾವ ಜಿಲ್ಲೆ ಟಾಸ್ಟ್?

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(95.33ರಷ್ಟು ಫಲಿತಾಂಶ), ಉಡುಪಿ ಜಿಲ್ಲೆಗೆ 2ನೇ ಸ್ಥಾನ, ಕೊಡಗು ಜಿಲ್ಲೆಗೆ 3ನೇ ಸ್ಥಾನದಲ್ಲಿದ್ದರೆ, ಉತ್ತರ ಕನ್ನಡ ಜಿಲ್ಲೆಗೆ 4ನೇ ಸ್ಥಾನ ಹಾಗೂ ಯಾದಗಿರಿ ಜಿಲ್ಲೆ ಕೊನೆ ಸ್ಥಾನದಲ್ಲಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ karresults.nic.in/ ವೆಬ್‌ಸೈಟ್‌ನಲ್ಲಿ ಪ್ರಕಟವಾಗಲಿದ್ದು, ಆನ್​ಲೈನ್​ ಮೂಲಕ ಚೆಕ್​ ಮಾಡುವುದು ಹೇಗೆ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಆನ್‌ ಲೈನ್‌ ನಲ್ಲಿ ಪರಿಶೀಲಿಸುವುದು ಹೇಗೆ?

ಹಂತ 1: ಕರ್ನಾಟಕ ಮಂಡಳಿಯ ಅಧಿಕೃತ ವೆಬ್‌ ಸೈಟ್‌ ಗೆ (karresults.nic.in/) ಭೇಟಿ ನೀಡಿ

ಹಂತ 2: ದ್ವಿತೀಯ ಪಿಯುಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ

ಹಂತ 3: ಫಲಿತಾಂಶದ ಲಿಂಕ್‌ನಲ್ಲಿ ದ್ವಿತೀಯ ಪಿಯುಸಿ ರೋಲ್ ಸಂಖ್ಯೆಯನ್ನು ನಮೂದಿಸಿ

ಹಂತ 4:  ಗೋಚರವಾದ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ರಾಜ್ಯದಲ್ಲಿ ಮಾ.9 ರಿಂದ ಮಾ.29ರವರೆಗೆ ನಡೆದಿದ್ದ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 7.26 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆಗೆ ನೋಂದಣಿ ಮಾಡಿಕೊಮಡಿದ್ದರು. ಅದರಲ್ಲಿ ಶೇ.6 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಉಳಿದಂತೆ ಎಲ್ಲ ವಿದ್ಯಾರ್ಥಿಗಳು ಕೂಡ ಪರೀಕ್ಷೆಯನ್ನು ಬರೆದಿದ್ದರು.